ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಈಗಾಗಲೇ ಬಿಜೆಪಿ ಶಾಸಕ ಮುನಿರತ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಮಹಿಳೆಯೊಬ್ಬರು ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸಿಗಿದ್ದಾನೆ ಎಂದು ಆರೋಪಿಸಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಿನ್ನೆ ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ ರಾಮನಗರ ಪೊಲೀಸರು ಮುನಿರತ್ನ ಅವರನ್ನು ವಶಕ್ಕೆ ಪಡೆದುಕೊಳ್ಳಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಹೌದು ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ಬಂಧಿಸಲು ರಾಮನಗರ ಪೊಲೀಸರಿಂದ ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ರಾಮನಗರ ಪೊಲೀಸರ ತಂಡ ಭೇಟಿ ನೀಡಲಿದೆ. ಕೋರ್ಟ್ ಗೆ ಅರ್ಜಿ ಸಲ್ಲಿಸಿ, ಅತ್ಯಾಚಾರ ಕೇಸಲ್ಲಿ ಹೆಚ್ಚಿನ ವಿಚಾರಣೆಗಾಗಿ ಶಾಸಕ ಮುನಿರತ್ನರನ್ನು ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ ಇಂದು ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಲಿದ್ದು, ಈ ಒಂದು ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಗಲಿ ಅಥವಾ ಸಿಗದೇ ಇದ್ದರೂ ಕೂಡ ರಾಮನಗರ ಪೊಲೀಸರು ಮಾತ್ರ ಅತ್ಯಾಚಾರ ಪ್ರಕರಣದಲ್ಲಿ ಇವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.