ಬೆಂಗಳೂರು : ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಅಧಿಕಾರಿಗಳು ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.
ಹೌದು ರಾಜ್ಯರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಎಚ್‌ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಅನ್ನು ಎಸ್‌ಐಟಿ ನ್ಯಾಯಾಲಯಕ್ಕೆ ಸಲ್ಲಿಸಿದೆ. ತಂದೆ ಮಗನ ವಿರುದ್ಧ ದಾಖಲಾದ ಮೊದಲ ಕೇಸ್‌ಗೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಇದಾಗಿದ್ದು, 2000 ಕ್ಕೂ ಅಧಿಕ ಪುಟವಿದೆ. 123 ಸಾಕ್ಷ್ಯಗಳು ಸಿಕ್ಕಿವೆ ಎನ್ನಲಾಗಿದೆ.
ಚಾರ್ಜ್ ಶೀಟ್ ಸಲ್ಲಿಕೆ ವೇಳೆ ಸುಮಾರು 2 ಸಾವಿರ ಪುಟಗಳನ್ನು ಒಳಗೊಂಡಿದ್ದು, 123 ಸಾಕ್ಷ್ಯಗಳನ್ನು ಸಂಗ್ರಹಿಸಿ ಮಾಡಲಾಗಿದೆ ಎನ್ನಲಾಗಿದೆ. ಸದ್ಯ 42 ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಮುಂದೆ ನ್ಯಾಯಾಲಯದಲ್ಲಿ ವಾದ ನಡೆಯಲಿದ್ದು, ಆ ಬಳಿಕ ತೀರ್ಪು ಬರಲಿದೆ.
ಇದೀಗ ಅಪ್ಪ ಮಗನ ವಿರುದ್ಧ 2144 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಪ್ರಕರಣದ ಕುರಿತು ಎಸ್ಐಟಿ ತಂಡ ಸಮಗ್ರವಾದಂತ ತನಿಖೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ಅಧಿಕಾರಿಗಳು 150ಕ್ಕೂ ಅಧಿಕ ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ಸಂತ್ರಸ್ತರು, ಪ್ರಮುಖ ಸಾಕ್ಷಿಗಳ ಸೆಕ್ಷನ್ 164 ಹೇಳಿಕೆಗಳನ್ನು ಕೂಡ SIT ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಈ ವೇಳೆ ದಾಖಲಿಸಿದ್ದಾರೆ.
ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ನಿನ್ನೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಾಗೂ ಅವರ ಪತ್ನಿ ಭವಾನಿ ಸೇರಿದಂತೆ 9 ಆರೋಪಿಗಳಿಗೆ ಆ.28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಪ್ರಕರಣದಲ್ಲಿ ಬಂಧಿತರಾಗಿರುವ ಸತೀಶ್‌ಬಾಬು, ಮನುಗೌಡ, ಕೆ.ಎ. ರಾಜಗೋಪಾಲ್, ಎಚ್.ಕೆ. ಸುಜಯ್, ಎಚ್.ಎನ್. ಮಧು, ಎಸ್.ಟಿ. ಕೀರ್ತಿ ಮತ್ತು ಅಜಿತ್ ಕುಮಾರ್‌ಗೆ ಐಪಿಸಿ ಸೆಕ್ಷನ್ 364 ‘ಎ’ ಕೈಬಿಟ್ಟು ಉಳಿದ ಆರೋಪಿಗಳಿಗೆ ಸಮನ್ಸ್ ನೀಡಿದೆ.