ಬೆಂಗಳೂರು: ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸಮಸ್ಯೆ ಹೇಳಿಕೊಳ್ಳೋದಕ್ಕೆ ಬಂದಿದ್ದಂತ ಮಹಿಳೆಗೆ ವಸತಿ ಸಚಿವ ವಿ ಸೋಮಣ್ಣ ( Minister V Somanna ) ಕಪಾಳ ಮೋಕ್ಷ ಮಾಡಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ( Social Media ) ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಇದೀಗ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರನ್ನು ಸಚಿವ ಸೋಮಣ್ಣ ಭೇಟಿಯಾಗಿದ್ದಾರೆ.
BREAKING NEWS: ಚಾಲಕನ ನಿಯಂತ್ರಣತಪ್ಪಿ ಹಳ್ಳಕ್ಕೆ ಇಳಿದ KSRTC ಬಸ್;25 ಮಂದಿ ಗಾಯ, ಆಸ್ಪತ್ರೆಗೆ ದಾಖಲು
ಸಿಎಂ ಬೊಮ್ಮಾಯಿ ನಿವಾಸಕ್ಕೆ ತೆರಳಿದಂತ ಸಚಿವ ವಿ.ಸೋಮಣ್ಣ ಅವರು, ಘಟನೆ ಸಂಬಂಧ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ. ಸಚಿವ ಸೋಮಣ್ಣ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಬುದ್ಧಿ ವಾದ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.
BIGG NEWS: ಬೆಂಗಳೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಗಂಡನನ್ನೇ ಕೊಲೆ ಮಾಡಿದ ಪಾಪಿ ಹೆಂಡ್ತಿ
ಅಂದಹಾಗೇ ಸಿಎಂ ಬೊಮ್ಮಾಯಿಯವರು ರಾಜ್ಯ ಬಿಜೆಪಿ ಸರ್ಕಾರಕ್ಕೆ ಇಂತಹ ಘಟನೆಯಿಂದ ಕೆಟ್ಟ ಹೆಸರು ಬಾರದಿರಲಿ ಎಂಬುದಾಗಿ ಕರೆದು ಬುದ್ಧಿವಾದ ಹೇಳೋದಕ್ಕೆ ಇಂದು ಸಚಿವರನ್ನು ಕರೆಸಿಕೊಂಡಿದ್ದಾರೆ ಎನ್ನಲಾಗಿದೆ. ಜೊತೆಗೆ ಮುಂದೆ ಹೀಗೆ ನಡೆದುಕೊಳ್ಳದಂತೆ ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ.