ಕರೀಂಗಂಜ್(ಅಸ್ಸಾಂ): ಅಸ್ಸಾಂ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗತಜ್ಞರೊಬ್ಬರು ಗರ್ಭಿಣಿ ಮಹಿಳೆಗೆ ನಿಗದಿತ ದಿನಾಂಕಕ್ಕಿಂತ ಅಂದ್ರೆ, ಮೂರೂವರೆ ತಿಂಗಳ ಮೊದಲೇ ಸಿಸೇರಿಯನ್ ಅಥವಾ ಸಿ-ಸೆಕ್ಷನ್ ಮಾಡಿದ್ದಾರೆ. ಈ ವೇಳೆ ವೈದ್ಯರು ಭ್ರೂಣವು ಅಕಾಲಿಕವಾಗಿದೆ ಎಂದು ತಿಳಿದು ಅದನ್ನು ಮತ್ತೆ ಹೊಟ್ಟೆಯೊಳಗೆ ಬಿಟ್ಟು ಹೊಲಿಗೆ ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಆ.21ರಂದು ಅಸ್ವಸ್ಥಗೊಂಡ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಕಾಲ ಆಕೆಯನ್ನು ಅಬ್ಸರ್ವೇಷನ್ನಲ್ಲಿಟ್ಟ ನಂತರ, ಡಿಸೆಂಬರ್ ಆರಂಭದಲ್ಲಿ ಮಹಿಳೆ ಮಗುವಿಗೆ ಜನ್ಮ ನೀಡುವುದಾಗಿ ತಿಳಿದಿದ್ದರೂ ವೈದ್ಯರು ಯಾವುದೇ ಅಲ್ಟ್ರಾಸೌಂಡ್ ಪರೀಕ್ಷೆ ನಡೆಸದೇ ಆಗಸ್ಟ್ 23 ರಂದು ಸಿಸೇರಿಯನ್ ಮಾಡಲು ನಿರ್ಧರಿಸಿದರು. ಸಿಸೇರಿಯನ್ ವೇಳೆ ಭ್ರೂಣವು ಅಕಾಲಿಕವಾಗಿದೆ ಎಂದು ತಿಳಿದು ವೈದ್ಯರು ಅದನ್ನು ಮತ್ತೆ ಹೊಟ್ಟೆಯೊಳಗೆ ಬಿಟ್ಟು ಹೊಲಿಗೆ ಹಾಕಿದ್ದಾರೆ.
ವೈದ್ಯರು ಈ ವಿಷಯವನ್ನು ಮುಚ್ಚಿಡಲು ಪ್ರಯತ್ನಿಸಿದ್ದಾರೆ. ಈ ಬಗ್ಗೆ ಯಾರೊಂದಿಗೂ ಚರ್ಚಿಸದಂತೆ ಮಹಿಳೆಯ ಕುಟುಂಬಕ್ಕೆ ಹೇಳಿದ್ದಾರೆ. ಆದರೆ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕೆಲವು ದಿನಗಳ ನಂತ್ರ ರೋಗಿಯ ಆರೋಗ್ಯ ಹದಗೆಟ್ಟಾಗ ಆಕೆಯ ಸಂಬಂಧಿಕರು ಮತ್ತು ನೆರೆಹೊರೆಯವರಿಗೆ ಈ ವಿಷಯ ತಿಳಿದಿದ್ದು, ಆಸ್ಪತ್ರೆ ವೈದ್ಯರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆಯ ವರದಿಯನ್ನು ನಾವು ಸ್ವೀಕರಿಸಿದ್ದೇವೆ. ಸತ್ಯ ಖಚಿತಪಡಿಸಿಕೊಳ್ಳಲು ವಿಚಾರಣೆ ನಡೆಸುತ್ತಿದ್ದೇವೆ. ವೈದ್ಯರು ಅಥವಾ ಬೇರೆಯವರ ವಿರುದ್ಧ ತಪ್ಪು ಕಂಡುಬಂದಲ್ಲಿ, ತನಿಖಾ ವರದಿಯನ್ನು ಅವಲಂಬಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಈ ಕುರಿತು ಪರಿಶೀಲಿಸಲು 11 ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು, ಶುಕ್ರವಾರ ಪ್ರಾಥಮಿಕ ವರದಿಯನ್ನು ಸಲ್ಲಿಸಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಯಾಂಗ ನಿಂದನೆ: ವಿಜಯ್ ಮಲ್ಯ ಬಗ್ಗೆ ಇಂದು ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರಿಂಕೋರ್ಟ್ | Vijay Mallya
JOBS ALEART: ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 229 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
Video: ಪಂಜಾಬ್ನ ಜಾತ್ರೆಯೊಂದರಲ್ಲಿ ಆಟವಾಡುತ್ತಿದ್ದಾಗ ನೆಲಕ್ಕೆ ಅಪ್ಪಳಿಸಿದ ಸ್ವಿಂಗ್… ಮಕ್ಕಳು ಸೇರಿ ಹಲವರಿಗೆ ಗಾಯ