ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಮೈಸೂರಿನ ಪಿರಿಯಾಪಟ್ಟಣದಲ್ಲಿ ಮಹಿಳೆಯರು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿದರು.
ಪಿರಿಯಾಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಇದೀಗ ಮುಂದುವರೆದಿದೆ.ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾನವ ಸರಪಳಿ ನಿರ್ಮಿಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.ಅಲ್ಲದೆ ಟೈರಿಗೆ ಬೆಂಕಿ ಹಚ್ಚಿ ಕೈ ಕಾರ್ಯಕರ್ತರು ರಸ್ತೆ ತಡೆ ಮಾಡಿ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದ್ದಾರೆ.