ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಕಿಟಕಿ ಓಪನ್ ಮಾಡುವ ವಿಶ್ಯಕ್ಕೆ ಸಂಬಂಧಪಟ್ಟಂತೆ ಇಬ್ಬರು ಮಹಿಳೆಯರು ಚಪ್ಪಲಿಯಿಂದ ಹೊಡೆದುಕೊಂಡು ಗಲಾಟೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿ ಮೆಜೆಸ್ಟಿಕ್‌ನಿಂದ ಪೀಣ್ಯದಾಸರಹಳ್ಳಿಗೆ ತೆರಳುವ ಬಸ್‌ನಲ್ಲಿ ಘಟನೆ ನಡೆದಿದ್ದು, ಘಟನೆ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.