ಮಡಿಕೇರಿ : ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಣ್ಮಕ್ಕಳ ಬಗ್ಗೆ ಅವರಿಗೆ ಇರುವ ಮನಸ್ಥಿತಿ ಅರ್ಥವಾಗುತ್ತದೆ. ಎರಡು ಬಾರಿ ಮುಖ್ಯಮಂತ್ರಿ ಆದವರು ಈ ರೀತಿ ಮಾತನಾಡಬಾರದಿತ್ತು ಎಂದು ಹೇಳಿದ್ದಾರೆ.
ಬಿಜೆಪಿಯ ಪ್ರಣಾಳಿಕೆಗೆ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿಯವರು ಇಂದಿಗೂ ನೀಡಿದ ಭರವಸೆ ಈಡೇರಿಸಿಲ್ಲ. ಮುಂದೇನು ಮಾಡಲ್ಲ. ಎಲ್ಲಿ ಉದ್ಯೋಗ ಸೃಷ್ಟಿ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ವಿ.ಸೋಮಣ್ಣ ಪರ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಾಗಿ ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ, ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಅವರ ಬದುಕು ಏನಾಗಬೇಕು ಎಂದು ಯೋಚನೆ ಮಾಡಬೇಕಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.