ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಶಕ್ತಿ ಯೋಜನೆಯಡಿ 500 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಈ ಮೂಲಕ ಕರ್ನಾಟಕದ ಶಕ್ತಿ ಯೋಜನೆ ವಿಶ್ವ ದಾಖಲೆಯನ್ನು ಬರೆದಿದೆ.
ಇಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಶಕ್ತಿ ಯೋಜನೆಯು ಪ್ರತಿಷ್ಠಿತ ವಿಶ್ವ ದಾಖಲೆಗೆ Golden Book of World Records ನಲ್ಲಿ ಸೇರ್ಪಡೆಯಾಗಿರುವುದನ್ನು ತಿಳಿಸಿ, ದಾಖಲೆಯ ಪ್ರಮಾಣ ಪತ್ರ ಮತ್ತು ಮೆಡಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೋರಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಹಳ ಸಂತೋಷ ವ್ಯಕ್ತಪಡಿಸಿ, ಸಾರಿಗೆ ಸಚಿವರಿಗೆ ಹಾಗೂ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ/ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರು.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.
ಈ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಪಂಚ ಗ್ಯಾರೆಂಟಿ ಯೋಜನೆಗಳ ರಾಜ್ಯಾಧ್ಯಕ್ಷ ಹೆಚ್.ಎಂ ರೇವಣ್ಣ, ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರು ಉಪಸ್ಥಿತರಿದ್ದರು.
ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಪ್ರಯುಕ್ತ ಈ ವಿಶೇಷ ರೈಲುಗಳು ಸಂಚಾರ
BREAKING : ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ನಿಷೇಧ ವಿರೋಧಿಸಿ ಬೃಹತ್ ಪ್ರತಿಭಟನೆ ; ಒರ್ವ ಸಾವು, 80 ಜನರಿಗೆ ಗಾಯ