ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯಡಿ ಪ್ರೋತ್ಸಾಹಧನ ಹಾಗೂ ಉದ್ಯೋಗಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಸೆಪ್ಟೆಂಬರ್ 21 ರ ಸಂಜೆ 5.30ರ ಒಳಗೆ ಗ್ರಾಮ ಒನ್, ಶಿವಮೊಗ್ಗ, ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ವ್ಯಾಪ್ತಿಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING: ಬೆಂಗಳೂರಲ್ಲಿ ಮೊಟ್ಟ ಮೊದಲ ಬಾರಿಗೆ ನಾಲ್ವರು ‘GST ಅಧಿಕಾರಿ’ಗಳು ಅರೆಸ್ಟ್
ರಾಹುಲ್ ಗಾಂಧಿ ಮೀಸಲಾತಿ ರದ್ದು ಹೇಳಿಕೆ ವಿವಾದ: ನಾಳೆ ರಾಜ್ಯಾಧ್ಯಂತ ಬಿಜೆಪಿಯಿಂದ ಪ್ರತಿಭಟನೆಗೆ ಕರೆ