Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : `ವಕ್ಫ್ ಆಸ್ತಿ’ ಅತಿಕ್ರಮಣ ವಿರುದ್ಧ ಹೋರಾಡುತ್ತಿದ್ದ ವಕೀಲನಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆಸಿ ಹತ್ಯೆ | WATCH VIDEO

ಪ್ರಕೃತಿ ಕೊಟ್ಟ ಸಂಜೀವಿನಿ ‘ನುಗ್ಗೆ ಸೊಪ್ಪು’: ಬಿಪಿ, ಶುಗರ್ ಸೇರಿ ಹಲವು ರೋಗಗಳಿಗೆ ರಾಮಬಾಣ ಈ ಸೊಪ್ಪು.!

ಹಾವೇರಿಯಲ್ಲಿ ಭೀಕರ ಮರ್ಡರ್ : ಅಂಗನವಾಡಿ ಕೇಂದ್ರದಲ್ಲಿ ಮಚ್ಚಿನಿಂದ ಕೊಚ್ಚಿ, ಅಕ್ಕನನ್ನ ಕೊಂದ ತಮ್ಮ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಶಕ್ತಿ ಯೋಜನೆ’ ಬಗ್ಗೆ ಮರುಚಿಂತನೆ ನಡೆಸಲು ‘ಮಹಿಳೆ’ಯರಿಂದಲೇ ಒತ್ತಡ: ಡಿಸಿಎಂ ಡಿ.ಕೆ ಶಿವಕುಮಾರ್ | Shakti Scheme
KARNATAKA

BREAKING: ‘ಶಕ್ತಿ ಯೋಜನೆ’ ಬಗ್ಗೆ ಮರುಚಿಂತನೆ ನಡೆಸಲು ‘ಮಹಿಳೆ’ಯರಿಂದಲೇ ಒತ್ತಡ: ಡಿಸಿಎಂ ಡಿ.ಕೆ ಶಿವಕುಮಾರ್ | Shakti Scheme

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಅನೇಕ ಮಂದಿ ಹೆಣ್ಣು ಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದೆ. ಉಚಿತ ಪ್ರಯಾಣ ಬೇಡ ಎಂದು ಟ್ವೀಟ್ ಹಾಗೂ ಇ-ಮೇಲ್ ಮೂಲಕ ವಿಚಾರ ತಿಳಿಸುತ್ತಿದ್ದಾರೆ. ಈ ಬಗ್ಗೆ ನಾವು ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದ ಮುಂಭಾಗ ಬುಧವಾರ ಐರಾವತ ಕ್ಲಬ್ ಕ್ಲಾಸ್ 2.0 ನೂತನ ಬಸ್ಸುಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ ಅವರು, “ನಾವು ಹಣ ಕೊಡಲು ಮುಂದಾದರೂ, ಕಂಡಕ್ಟರ್ ಅವರು ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನುಕೂಲ ಸ್ಥಿತಿಯಲ್ಲಿರುವ ಶೇ 5 ರಿಂದ 10 ರಷ್ಟು ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ. ಶೀಘ್ರದಲ್ಲಿ ಇದರ ಬಗ್ಗೆ ನಾನು ರಾಮಲಿಂಗಾರೆಡ್ಡಿ ಅವರ ಜತೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚೆ ನಡೆಸುತ್ತೇವೆ” ಎಂದರು.

“ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಕೆ ಎಸ್ ಆರ್ ಟಿ ಸಿ ಸಂಸ್ಥೆ ಹೆಸರು ಮಾಡಿದೆ. ಕಳೆದ ಒಂದು ವರ್ಷದಲ್ಲಿ 112 ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಸಾಧನೆಗೆ ಸಂಸ್ಥೆಯ ನೌಕರರ ಶ್ರಮ ಕಾರಣ” ಎಂದರು.

“ಐರಾವತ ಎಂದರೆ ಇಂದ್ರನ ವಾಹನ, ಆನೆ ಎಂದು ಅರ್ಥ. ಆನೆಯಂತೆ ಬಲಶಾಲಿ ಎಂದು ಅರ್ಥ. ವೋಲ್ವೋ ಸಂಸ್ಥೆಯ ಈ ಬಸ್ಸಿಗೆ 1.60 ಕೋಟಿ ಎಂದು ಸಂಸ್ಥೆಯವರು ಹೇಳಿದ್ದಾರೆ. ಇತ್ತೀಚಿಗೆ ನಾವು ಒಂದು ಕಾರು ತೆಗೆದುಕೊಳ್ಳಬೇಕು ಎಂದರೆ ಒಂದು ಕೋಟಿ ಮೀರುತ್ತದೆ” ಎಂದರು.

“ಕೆಎಸ್ಆರ್ ಟಿಸಿ ಪ್ರಾರಂಭವಾದಾಗ ಕೇವಲ 120 ಬಸ್ ಗಳು ಇದ್ದವು, ಇಂದು 24,282 ಬಸ್ ಗಳು ಇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 6,200 ಬಸ್ ಗಳ ಖರೀದಿಗೆ ಮುಂದಾಗಿದೆ. ಇದರಲ್ಲಿ 3,400 ಬಸ್ ಗಳನ್ನು ಖರೀದಿ ಮಾಡಲಾಗಿದೆ. ಸುಮಾರು 9 ಸಾವಿರ ಡ್ರೈವರ್ ಹಾಗೂ ಕಂಡಕ್ಟರ್ ಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ” ಎಂದರು.

“ಅನುಕಂಪದ ಆಧಾರದ ಮೇಲೆ ಒಂದು ಸಾವಿರಕ್ಕೂ ಹೆಚ್ಚು ನೌಕರರ ಕುಟುಂಬಸ್ಥರಿಗೆ ಉದ್ಯೋಗ ನೀಡಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ನೌಕರರ ಕುಟುಂಬದವರಿಗೆ ಒಂದು ಕೋಟಿ ರೂ. ಪರಿಹಾರ ನೀಡಲಾಗಿದೆ. ಇಡೀ ಭಾರತದಲ್ಲಿಯೇ ಇಲ್ಲದ ಅತ್ಯುತ್ತಮವಾದ ವ್ಯವಸ್ಥೆ ನಮ್ಮಲ್ಲಿದೆ” ಎಂದರು.

“ಕರ್ನಾಟಕ ಸಾರಿಗೆ ಸಂಸ್ಥೆಯನ್ನು ವ್ಯವಹಾರಕ್ಕಾಗಿ ಹುಟ್ಟಿಹಾಕಿಲ್ಲ. ನಾಗರಿಕರ ಸೇವೆಗಾಗಿ ಇದನ್ನು ಮೀಸಲಿಡಲಾಗಿದೆ. ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ, ಇಂಧನ ಬೆಲೆ ಹೆಚ್ಚಾದ ತಕ್ಷಣ ಟಿಕೆಟ್ ದರವೂ ಹೆಚ್ಚಾಗಬೇಕು ಎನ್ನುವ ನಿಯಮ ಮಾಡಲಾಗಿತ್ತು” ಎಂದರು.

“ಸಂಸ್ಥೆಯಲ್ಲಿ ಈಗ ಶಿಸ್ತು ಬಂದಿದೆ. ಚಾಲಕರು ನಿಯಮಕ್ಕೆ ಅನುಸಾರವಾಗಿ ನಡೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಸುಮಾರು 1.80 ಕೋಟಿ ಜನರು ಪ್ರಯಾಣ ಮಾಡುತ್ತಿದ್ದಾರೆ” ಎಂದರು.

“ಕೆಎಸ್ ಆರ್ ಟಿಸಿ ಸಂಸ್ಥೆ ಇದ್ದರೆ ಸರ್ಕಾರಕ್ಕೆ ಒಳ್ಳೆಯ ಹೆಸರು. ಖಾಸಗಿಯವರು ಸಂಸ್ಥೆಗೆ ಡಿಸೇಲ್ ಅನ್ನು ಕಡಿಮೆ ದರದಲ್ಲಿ ನೀಡುತ್ತೇವೆ ಎಂದು ಮುಂದೆ ಬಂದಿದ್ದಾರೆ. ಇದರ ಬಗ್ಗೆ ಎಲ್ಲರ ಅಭಿಪ್ರಾಯ ಪಡೆದು ಮುಂದುವರೆಯಲಾಗುವುದು” ಎಂದರು.

“ನಾನು ಈ ಹಿಂದೆ ಶಾಸಕನಾಗಿದ್ದಾಗ ಎರಡು ಮೂರು ಸಲ ಐರಾವತ ಬಸ್ ನಲ್ಲಿ ಪ್ರಯಾಣ ಮಾಡಿದ್ದೆ. ಇಂದು ಲೋಕಾರ್ಪಣೆಯಾಗಿರುವ ಐರಾವತ ಬಸ್ ನೋಡುತ್ತಿದ್ದರೆ ಬಹಳ ಸಂತೋಷವಾಗುತ್ತಿದೆ. ಚುನಾವಣೆ ಸಮಯದಲ್ಲಿ ಪ್ರಚಾರಕ್ಕಾಗಿ ಇದೇ ಬಸ್ ಗಳನ್ನು ಬಳಸಲಾಗುತ್ತಿತ್ತು. ಅವಕಾಶ ಸಿಕ್ಕಾಗ ನಾನು ಐರಾವತ ಬಸ್ ನಲ್ಲಿ ದೂರ ಪ್ರಯಾಣ ಮಾಡುವೆ. ರಾಮಲಿಂಗಾರೆಡ್ಡಿಯವರೇ ನಮಗೂ ಪ್ರಯಾಣ ಮಾಡಲು ಒಂದು ಅವಕಾಶ ಒದಗಿಸಿ ಕೊಡಿ” ಎಂದರು.

“ರಾಮಲಿಂಗಾರೆಡ್ಡಿ ಅವರು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು, ಕಾಂಗ್ರೆಸ್ ಸರ್ಕಾರಕ್ಕೆ ಉತ್ತಮ ಹೆಸರು ಬರುವಂತೆ ಕೆಲಸ ಮಾಡುತ್ತಿದ್ದಾರೆ. ಸಾರಿಗೆ ವ್ಯವಸ್ಥೆಯಲ್ಲಿ ದೊಡ್ಡ ಕ್ರಾಂತಿಯನ್ನು ಮಾಡಿದ್ದಾರೆ” ಎಂದರು.

ಸೈನಿಕರು, ಮಾಜಿ ಸೈನಿಕರಿಗೆ ಗುಡ್ ನ್ಯೂಸ್: ಸರ್ಕಾರಿ ಉದ್ಯೋಗ ‘ನೇಮಕಾತಿ ತರಬೇತಿ’ಗೆ ಅರ್ಜಿ ಆಹ್ವಾನ

BREAKING: ಇಂದು ಸಂಜೆ 4 ಗಂಟೆಗೆ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ

Share. Facebook Twitter LinkedIn WhatsApp Email

Related Posts

ಪ್ರಕೃತಿ ಕೊಟ್ಟ ಸಂಜೀವಿನಿ ‘ನುಗ್ಗೆ ಸೊಪ್ಪು’: ಬಿಪಿ, ಶುಗರ್ ಸೇರಿ ಹಲವು ರೋಗಗಳಿಗೆ ರಾಮಬಾಣ ಈ ಸೊಪ್ಪು.!

2 Mins Read

ಹಾವೇರಿಯಲ್ಲಿ ಭೀಕರ ಮರ್ಡರ್ : ಅಂಗನವಾಡಿ ಕೇಂದ್ರದಲ್ಲಿ ಮಚ್ಚಿನಿಂದ ಕೊಚ್ಚಿ, ಅಕ್ಕನನ್ನ ಕೊಂದ ತಮ್ಮ!

1 Min Read

BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳ ₹100 ಕೋಟಿ ದುರ್ಬಳಕೆ, ಹೀಗಾಗಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ : DCM ಡಿ.ಕೆ.ಶಿವಕುಮಾರ್

1 Min Read
Recent News

SHOCKING : `ವಕ್ಫ್ ಆಸ್ತಿ’ ಅತಿಕ್ರಮಣ ವಿರುದ್ಧ ಹೋರಾಡುತ್ತಿದ್ದ ವಕೀಲನಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆಸಿ ಹತ್ಯೆ | WATCH VIDEO

ಪ್ರಕೃತಿ ಕೊಟ್ಟ ಸಂಜೀವಿನಿ ‘ನುಗ್ಗೆ ಸೊಪ್ಪು’: ಬಿಪಿ, ಶುಗರ್ ಸೇರಿ ಹಲವು ರೋಗಗಳಿಗೆ ರಾಮಬಾಣ ಈ ಸೊಪ್ಪು.!

ಹಾವೇರಿಯಲ್ಲಿ ಭೀಕರ ಮರ್ಡರ್ : ಅಂಗನವಾಡಿ ಕೇಂದ್ರದಲ್ಲಿ ಮಚ್ಚಿನಿಂದ ಕೊಚ್ಚಿ, ಅಕ್ಕನನ್ನ ಕೊಂದ ತಮ್ಮ!

ವಿಶ್ವಪ್ರಸಿದ್ಧ ತಾಜ್ ಮಹಲ್ ವೀಕ್ಷಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ದಂಪತಿ

State News
KARNATAKA

ಪ್ರಕೃತಿ ಕೊಟ್ಟ ಸಂಜೀವಿನಿ ‘ನುಗ್ಗೆ ಸೊಪ್ಪು’: ಬಿಪಿ, ಶುಗರ್ ಸೇರಿ ಹಲವು ರೋಗಗಳಿಗೆ ರಾಮಬಾಣ ಈ ಸೊಪ್ಪು.!

By kannadanewsnow57 KARNATAKA 2 Mins Read

ನಮ್ಮ ಮನೆಯ ಆಸುಪಾಸಿನಲ್ಲಿ, ಹಿತ್ತಲಿನಲ್ಲಿ ಅತಿ ಸುಲಭವಾಗಿ ಸಿಗುವ ನುಗ್ಗೆ ಸೊಪ್ಪನ್ನು ನಾವು ಕೇವಲ ಒಂದು ಸಾಮಾನ್ಯ ತರಕಾರಿ ಅಂದುಕೊಂಡಿದ್ದರೆ…

ಹಾವೇರಿಯಲ್ಲಿ ಭೀಕರ ಮರ್ಡರ್ : ಅಂಗನವಾಡಿ ಕೇಂದ್ರದಲ್ಲಿ ಮಚ್ಚಿನಿಂದ ಕೊಚ್ಚಿ, ಅಕ್ಕನನ್ನ ಕೊಂದ ತಮ್ಮ!

BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳ ₹100 ಕೋಟಿ ದುರ್ಬಳಕೆ, ಹೀಗಾಗಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ : DCM ಡಿ.ಕೆ.ಶಿವಕುಮಾರ್

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ: ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.