ನವದೆಹಲಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಕಾರ್ಯಾಚರಣೆಯನ್ನು ಮಹಿಳೆಯರಿಗೆ ಹಸ್ತಾಂತರಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.
“ನಾಳೆ ಮಹಿಳಾ ದಿನ. ನವಸಾರಿಯಲ್ಲಿ ನಾನು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದೇನೆ. ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ನಾನು ನನ್ನ ಸಾಮಾಜಿಕ ಮಾಧ್ಯಮ ಖಾತೆಯನ್ನು ಅಂತಹ ಕೆಲವು ಸ್ಪೂರ್ತಿದಾಯಕ ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಹಸ್ತಾಂತರಿಸಲಿದ್ದೇನೆ” ಎಂದು ಪ್ರಧಾನಿ ಮೋದಿ ಕಾರ್ಯಕ್ರಮವೊಂದರಲ್ಲಿ ಹೇಳಿದರು.