ಬೆಂಗಳೂರು: ನಾಳೆ ಬೆಂಗಳೂರಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ (WPL) ಕ್ರಿಕೆಟ್ 2025 ನಡೆಯಲಿದೆ. ಈ ಹಿನ್ನಲೆಯಲ್ಲಿ ವೀಕ್ಷಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಪಂದ್ಯಗಳಿಗೆ ಮೆಟ್ರೋ ರೈಲು ಸೇವೆಗಳ ವಿಸ್ತರಣೆ ಮಾಡಲಾಗಿದೆ.
ಟಾಟಾ ಮಹಿಳಾ ಪ್ರೀಮಿಯರ್ ಲೀಗ್ (WPL) T-20 ಕ್ರಿಕೆಟ್ ಪಂದ್ಯಗಳು ಬೆಂಗಳೂರಿನಲ್ಲಿ ಫೆಬ್ರವರಿ 21, 22, 24, 25, 26, 27, 28 ಮತ್ತು ಮಾರ್ಚ್ 01, 2025 ರಂದು ನಡೆಯಲಿವೆ.
ಕ್ರಿಕೆಟ್ ಪಂದ್ಯಗಳಿಗೆ ಪ್ರಯಾಣಿಸಲು ಮತ್ತು ಹಿಂತಿರುಗಲು ಅನುಕೂಲವಾಗುವಂತೆ, ಬಿ.ಎಂ.ಆರ್.ಸಿ.ಎಲ್ ಈ ಮೇಲೆ ತಿಳಿಸಿದ ದಿನಗಳಲ್ಲಿ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಿದೆ.
ನೇರಳೆ ಮತ್ತು ಹಸಿರು ಮಾರ್ಗಗಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಾದ ಚಲ್ಲಘಟ್ಟ, ವೈಟ್‌ಫೀಲ್ಡ್, ಮಾದಾವರ ಮತ್ತು ರೇಷ್ಮೆ ಸಂಸ್ಥೆಯಿಂದ ಕೊನೆಯ ರೈಲು ಸೇವೆ ರಾತ್ರಿ 11.20 ರವರೆಗೆ ಮತ್ತು ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ರಾತ್ರಿ 11:55 ಕ್ಕೆ ಹೊರಡುತ್ತವೆ.
ಪ್ರಯಾಣಿಕರು ಮೆಟ್ರೋ ಪ್ರಯಾಣಕ್ಕಾಗಿ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್‌ಗಳು (ಎನ್‌ಸಿಎಂಸಿ) ಮತ್ತು ಟೋಕನ್‌ಗಳನ್ನು ಬಳಸಿ ಪ್ರಯಾಣಿಸಬಹುದು.
ಬೆಂಗಳೂರಿನಲ್ಲಿ ನಡೆಯುವ ಟಾಟಾ ಮಹಿಳಾ ಪ್ರಮಿಯರ್ ಲೀಗ್ (WPL) T-20 ಕ್ರಿಕೆಟ್ ನ ಪಂದ್ಯಗಳ ದಿನದಂದು #ನಮ್ಮಮೆಟ್ರೋ ನ ನೇರಳೆ ಮತ್ತು ಹಸಿರು ಮಾರ್ಗದ ರೈಲು ಸೇವೆಗಳನ್ನು ವಿಸ್ತರಿಸಲಾಗಿದೆ. ವಿವರಗಳಿಗಾಗಿ ಮಾಧ್ಯಮ ಪ್ರಕಟಣೆಯನ್ನು ಪರಿಶೀಲಿಸಿ 👇🏻 pic.twitter.com/Yb1frqhqLO
— ನಮ್ಮ ಮೆಟ್ರೋ (@OfficialBMRCL) February 20, 2025
ರಾಜ್ಯ ಸರ್ಕಾರದಿಂದ ಕೃಷಿ ನವೋದ್ಯಮಗಳಿಗೆ 14 ಕೋಟಿ ಬಿಡುಗಡೆ: ಸಚಿವ ಎನ್.ಚಲುವರಾಯಸ್ವಾಮಿ
ರಾಜ್ಯದಲ್ಲಿ ‘ಅನುದಾನಿತ ಶಾಲಾ ಶಿಕ್ಷಕ’ರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್