Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಯಸ್ಸು ಕೇವಲ ಸಂಖ್ಯೆ: 10ನೇ ತರಗತಿ ಪರೀಕ್ಷೆಯಲ್ಲಿ 77% ಅಂಕ ಗಳಿಸಿದ ಪಂಜಾಬ್‌ ನ 61 ವರ್ಷದ ಅಜ್ಜಿ | grandmother scores 77%

1947ರಲ್ಲಿ 79 ರೂಪಾಯಿ, 2026ರಲ್ಲಿ 1.6 ಲಕ್ಷ : ಭಾರತದಲ್ಲಿ ಚಿನ್ನದ ಬೆಲೆ ಏರಿಕೆಯ ಅಚ್ಚರಿಯ ಹಾದಿ | Gold price in India

ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಿಳಾ ಮೀಸಲು ಮಸೂದೆ ಸೋಲು; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ
KARNATAKA

ಮಹಿಳಾ ಮೀಸಲು ಮಸೂದೆ ಸೋಲು; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಶೇ.33ರಷ್ಟು ಮೀಸಲಾತಿ ನೀಡುವ ವಿಧೇಯಕಕ್ಕೆ ಕಾಂಗ್ರೆಸ್‌ ಮತ್ತು ಅದರ ಮಿತ್ರಪಕ್ಷಗಳ ಷಡ್ಯಂತ್ರ್ಯದಿಂದ ಲೋಕಸಭೆಯಲ್ಲಿ ಲೋಕಸಭೆಯಲ್ಲಿ ಸೋಲಾಗಿದ್ದನ್ನು ಖಂಡಿಸಿ ಜೆಡಿಎಸ್‌ ಮಹಿಳಾ ಘಟಕ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿತು.

ಪಕ್ಷದ ಶಾಸಕರು, ವಿಧಾನಪರಿಷತ್‌ ಸದಸ್ಯರು ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದ ಈ ಪ್ರತಿಭಟನೆಯಲ್ಲಿ ಜೆಡಿಎಸ್‌ ಕಾರ್ಯಕರ್ತೆಯರು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ಮಿತ್ರಪಕ್ಷಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಮಾಜಿ ಸಚಿವೆ ಲೀಲಾದೇವಿ ಆರ್‌ ಪ್ರಸಾದ್‌ ಅವರು; 1996ರಲ್ಲಿ ಶಾಸನಸಭೆಗಳಲ್ಲಿ ಮಹಿಳೆಯರಿಗೆ ನ್ಯಾಯೋಚಿತ ಮೀಸಲಾತಿ ನೀಡುವ ಉದ್ದೇಶದಿಂದ ಸಂಸತ್ತಿನಲ್ಲಿ ಮಹಿಳಾ ಮೀಸಲು ವಿಧೇಯಕವನ್ನು ಮಂಡಿಸಿದ್ದರು. ಅಂದು ಕೂಡ ಕಾಂಗ್ರೆಸ್‌ ಮತ್ತು ಸಂಯುಕ್ತ ರಂಗದ ಕೆಲ ಮಿತ್ರಪಕ್ಷಗಳ ಕುಯುಕ್ತಿಯಿಂದ ಆ ಮಸೂದೆಗೆ ಸೋಲಾಯಿತು. ಮತ್ತೆ ಅದೇ ಇತಿಹಾಸ ಮರುಕಳಿದ್ದು, ರಾಷ್ಟ್ರದ ಮಹಿಳೆಯರಿಗೆ ಕಾಂಗ್ರೆಸ್‌ ಮೋಸ ಮಾಡಿದೆ ಎಂದು ಟೀಕಿಸಿದರು.

ಕಾಂಗ್ರೆಸ್‌ ಹಿಂದಿನಿಂದಲೂ ಮಹಿಳಾ ವಿರೋಧಿ ನೀತಿಯನ್ನೇ ಅನುಸರಿಸಿಕೊಂಡು ಬರುತ್ತಿದೆ ಎಂದು ದೂರಿದ ಅವರು, ಮಹಿಳಾ ಮೀಸಲು ಮಸೂದೆ ಸೋಲಿಗೆ ಕಾರಣರಾದ ಕಾಂಗ್ರೆಸ್ಸಿಗರನ್ನು ರಾಷ್ಟ್ರದ ಮಹಿಳೆಯರು ಶಾಶ್ವತವಾಗಿ ಮನೆಯಲ್ಲಿ ಕೂರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರೇಟರ್‌ ಬೆಂಗಳೂರು ಜೆಡಿಎಸ್‌ ಅಧ್ಯಕ್ಷ ಹೆಚ್.ಎಂ. ರಮೇಶ್‌ ಗೌಡ, ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ, ನಗರ ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್‌ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ರಮೇಶ್‌ ಗೌಡ, ಶರವಣ ಮೊದಲಾದವರು; ಮಹಿಳೆಯರ ಭವಿಷ್ಯಕ್ಕೆ ಕಾಂಗ್ರೆಸ್ ಪಕ್ಷ ಹಾಗೂ ಅದರ ಮಿತ್ರಪಕ್ಷಗಳು ಧಕ್ಕೆ ಉಂಟು ಮಾಡಿವೆ. ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿ ಅನುಷ್ಠಾನ ಮಾಡಿದ್ದಿದ್ದರೆ ರಾಷ್ಟ್ರದಲ್ಲಿ ಇತಿಹಾಸ ಸೃಷ್ಟಿ ಆಗುತ್ತಿತ್ತು. ಕಾಂಗ್ರೆಸ್‌ ಪಕ್ಷ ಒಂದು ಸುವರ್ಣಾವಕಾಶವನ್ನು ಕೈಚೆಲ್ಲಿದೆ ಎಂದು ಕಿಡಿಕಾರಿದರು.

ವಿಧಾನಸಭೆಗಳು ಮತ್ತು ಲೋಕಸಭೆಯಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾದರೆ ತಮ್ಮ ಅಸ್ತಿತ್ವಕ್ಕೆ ಧಕ್ಕೆ ಬರುತ್ತದೋ ಎನ್ನುವ ಭಯದಲ್ಲಿ ಕಾಂಗ್ರೆಸ್‌ ಈ ಮಸೂದೆಗೆ ಬೆಂಬಲ ನೀಡಿದೇ ಕೈಕೊಟ್ಟಿದೆ. ಅದರ ಮಿತ್ರಪಕ್ಷಗಳು ಕೂಡ ಅದೇ ವರ್ತನೆ ತೋರಿರುವುದು ಖಂಡನೀಯ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಬೆಂಗಳೂರು ಉತ್ತರ ಜಿಲ್ಲಾ ಮಹಿಳಾ ಅಧ್ಯಕ್ಷೆ ಕವಿತಾ ರೆಡ್ಡಿ, ಪಶ್ಚಿಮ ಜಿಲ್ಲಾ ಅಧ್ಯಕ್ಷೆ ಮಂಗಳಮ್ಮ, ಮುಖಂಡರುಗಳಾದ ಮಲ್ಲೇಶ್ವರಿ, ಕವಿತಾ, ಅನುರಾಧ, ಜಯಲಕ್ಷ್ಮಿ ಕಾರ್ತಿಕ್, ವಿಜಯಲಕ್ಷ್ಮಿಹಾಗೂ ಇನ್ನಿತರ ಮಹಿಳಾ ಮುಖಂಡರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಈ ಮಹಿಳಾ ಪ್ರತಿಭಟನೆಗೆ ಶಾಸಕರು, ಮಾಜಿ ಶಾಸಕರು, ಜಿಬಿಎ ಜಿಲ್ಲಾಧ್ಯಕ್ಷರುಗಳು ಹಾಗೂ ಗ್ರೇಟರ್ ಬೆಂಗಳೂರು ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರುಗಳು ಸಹಕಾರ ನೀಡಿದರು.

ವಿಪಕ್ಷಗಳ ಅಸಲಿ ಮುಖವಾಡ ಕಳಚಿದೆ: ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಗಂಭೀರ ಆರೋಪ

BREAKING: ಇಂದು ದೇಶವನ್ನ ಉದ್ದೇಶಿಸಿ ಪ್ರಧಾನಿ ಮೋದಿ ಮಾಡಿದ ಭಾಷಣದ ಸಂಪೂರ್ಣ ಹೈಲೈಟ್ಸ್ ಇಲ್ಲಿದೆ | PM Modi Speech

Share. Facebook Twitter LinkedIn WhatsApp Email

Related Posts

ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

1 Min Read

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

2 Mins Read

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

1 Min Read
Recent News

ವಯಸ್ಸು ಕೇವಲ ಸಂಖ್ಯೆ: 10ನೇ ತರಗತಿ ಪರೀಕ್ಷೆಯಲ್ಲಿ 77% ಅಂಕ ಗಳಿಸಿದ ಪಂಜಾಬ್‌ ನ 61 ವರ್ಷದ ಅಜ್ಜಿ | grandmother scores 77%

1947ರಲ್ಲಿ 79 ರೂಪಾಯಿ, 2026ರಲ್ಲಿ 1.6 ಲಕ್ಷ : ಭಾರತದಲ್ಲಿ ಚಿನ್ನದ ಬೆಲೆ ಏರಿಕೆಯ ಅಚ್ಚರಿಯ ಹಾದಿ | Gold price in India

ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

State News
KARNATAKA

ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

By ಸುರೇಶ್‌ KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರ ವಿಜಾಬ್ ನಿಷೇಧ ಆದೇಶವನ್ನು ಪಡೆದಿದ್ದು ಇನ್ಮುಂದೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಜನಿವಾರ, ರುದ್ರಾಕ್ಷಿ, ಶಿವದಾರ ಹಾಗೂ…

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

BIG NEWS : ಹೈಕಮಾಂಡ್ ಕರೆದಿಲ್ಲ, ಹಾಗಾಗಿ ಸದ್ಯಕ್ಕೆ ದೆಹಲಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.