ಚಿಕ್ಕೋಡಿ : ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡದಿದ್ರೆ ಕರೆಂಟು ಕೊಡಲ್ಲ ಅಂತ ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಹೌದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡದಿದ್ರೆ ಕರೆಂಟು ಕೊಡಲ್ಲ ಮತದಾರರಿಗೆ ಹೇಳಿದ್ದಾರೆ
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಮತ ಪ್ರಚಾರದ ವೇಳೆ ಅವರು ಈ ಬಗ್ಗೆ ಹೇಳಿದ್ದಾರೆ ಎನ್ನುವ ಆರೋಪವಿದೆ. ವೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಲೀಡ್ ಕೊಡದಿದ್ರೆ ಈ ಸಲ ಕರೆಂಟೇ ಕೊಡೊಲ್ಲ ಎಂದು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.