ಬೆಂಗಳೂರು : ಬಿಜೆಪಿ ಅವಧಿಯಲ್ಲಿ ನಡೆದ ಎಲ್ಲಾ ಹಗರಣಗಳನ್ನು ತನಿಖೆ ಮಾಡಿಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸದೆ ಬಿಡುವುದಿಲ್ಲ ಎಂದು ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಇಂದು ಗುಡುಗಿದರು.
ವಿಧಾನಮಂಡಲ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕರು ನಡುವೆ ತೀವ್ರ ಜಟಾಪಟಿ ನಡೆಯಿತು ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಅವಧಿಯಲ್ಲಿನ 21 ಹಗರಣಗಳನ್ನು ಪ್ರಸ್ತಾಪಿಸಿದರು. ವಿಧಾನಸಭೆಯಲ್ಲಿ ಬಿಜೆಪಿ ಅವಧಿಯ ಹಾರಣಗಳನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು.
ಎಪಿಎಂಸಿ ಹಗರಣ, ದೇವರಾಜು ಅರಸು ಟ್ರಕ್ ಟರ್ಮಿನಲ್ ಹಗರಣ, ಪ್ರವಾಸೋದ್ಯಮ ಇಲಾಖೆಯಲ್ಲಿ ಹಗರಣ, ಕೋವಿಡ್ ಸಂದರ್ಭದಲ್ಲಿ ಹಗರಣ, ಪಿಎಸ್ಐ ನೇಮಕಾತಿ ಹಗರಣ ಸೇರಿ ಒಟ್ಟು 21 ಹಗರಣಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ವಾಲ್ಮೀಕಿ ನಿಗಮದ ಹಗರಣ ಕುರಿತ ಚರ್ಚೆಗೆ 12 ಪುಟಗಳ ಉತ್ತರ ನೀಡಿದು, ವಿಧಾನಸಭೆಯಲ್ಲಿ 12 ಪುಟಗಳ ಲಿಖಿತ ಉತ್ತರ ನೀಡಿದರು.
ನನ್ನ ಹೆಸರು ಹೇಳದಿದ್ದರೆ ಬಿಜೆಪಿಯವರಿಗೆ ತಿಂದಿದ್ದು ಜೀರ್ಣ ಆಗಲ್ಲ ಎಂದು ವಿಧಾನಸಭೆಯಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನಿಮ್ಮನ್ನು ಕಳ್ಳರು, ಲೂಟಿಕೋರರು ಅಂತ ಜನ ವಿಪಕ್ಷದಲ್ಲಿರಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಾವು 136 ಸ್ಥಾನಗಳನ್ನು ಗೆದ್ದಿದ್ದೇವೆ. ಎಲ್ಲಾ ಹಗರಣ ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೆ ಬಿಡುವುದಿಲ್ಲ ತನಿಖೆ ಮಾಡಿ ತಪ್ಪು ಮಾಡಿದವರನ್ನು ಜೈಲಿಗೆ ಕಳುಹಿಸದೆ ಬಿಡಲ್ಲ ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಬಿಡುವುದಿಲ್ಲ ಎಲ್ಲರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.