ಬೆಂಗಳೂರು: ನಿಗದಿಯಂತೆ ಕೆಪಿಎಸ್ಸಿಯ ಕೆಎಎಸ್ ಪರೀಕ್ಷೆಗಳು ನಡೆಯಲಿದ್ದಾವೆ. ಆದರೇ ಕೃಷ್ಣ ಜನ್ಮಾಷ್ಟಮಿಯಂದು ನಿಗದಿ ಪಡಿಸಲಾಗಿರುವಂತ ಪರೀಕ್ಷೆಯ ದಿನಾಂಕವನ್ನು ಮಾತ್ರವೇ ಬದಲಾವಣೆ ಮಾಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.
ಅವರು ಇಂದು ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೆಪಿಎಸ್ ಸಿ ಪರೀಕ್ಷೆ ಬಗ್ಗೆ ಗೊಂದಲವಿರುವ ಬಗ್ಗೆ ಮಾತನಾಡುತ್ತಾ, ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದರು.
ಸರ್ಕಾರ ಬಸ್ ದರಗಳನ್ನು ಹೆಚ್ಚಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಬಸ್ ದರದಂತೆಯೇ ನೀರಿನ ದರವನ್ನು ಏರಿಸಲಾಗುವುದು ಎಂದಿದ್ದರು. ಆದರೆ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ. ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಅಂದಹಾಗೇ ಆಗಸ್ಟ್.27ರಿಂದ ಕೆಪಿಎಸ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದಾವೆ. ಆಗಸ್ಟ್.27ರ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ಇನ್ನೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಸಲು ನಿಗದಿ ಪಡಿಸಲಾಗಿದೆ. ಈ ಕೆಪಿಎಸ್ಸಿ ಪರೀಕ್ಷೆಯ ಹಿನ್ನಲೆಯಲ್ಲಿ ಆಗಸ್ಟ್.27ರಂದು ಸರ್ಕಾರಿ ನೌಕರರು ಯಾರೆಲ್ಲ ಪರೀಕ್ಷೆ ತೆಗೆದುಕೊಂಡಿದ್ದಾರೋ ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಂದು ಒಂದು ದಿನ ಸಾಂದರ್ಭಿಕ ರಜೆಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ.
ರಾಜ್ಯಪಾಲರ ಸಂವಿಧಾನ ಬಾಹಿರ ನಿರ್ಣಯದ ಬಗ್ಗೆ ವರಿಷ್ಠರಿಗೆ ವಿವರಣೆ: ಸಿಎಂ ಸಿದ್ಧರಾಮಯ್ಯ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ: NC ಜೊತೆಗಿನ ಮೈತ್ರಿಯ ಬಗ್ಗೆ ಬಿಜೆಪಿ ಟೀಕೆಗೆ ಕಾಂಗ್ರೆಸ್ ತಿರುಗೇಟು