ಕಲಬುರ್ಗಿ : ನನ್ನನ್ನು ಅಧಿಕಾರದಿಂದ ಕೆಳಗೆ ಇಳಿಸಲು ಹುನ್ನಾರ ನಡೆಯುತ್ತಿದೆ. ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದಕ್ಕೆ ನನ್ನನ್ನು ಮುಗಿಸಲು ಯತ್ನಿಸುತ್ತಿಲಾಗುತ್ತಿದೆ. ಆದರೆ ನಾನು ಅಧಿಕಾರದಲ್ಲಿ ಇರುವವರೆಗೂ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಇಂದು ಕಲಬುರ್ಗಿ ತಾಲೂಕಿನ ಕವಲಗ (ಕೆ) ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಯತ್ನಿಸುತ್ತಿಲಾಗುತ್ತಿದೆ. ನನ್ನನ್ನು ಮುಗಿಸಲು ನೀವು ಬಿಡ್ತೀರಾ? ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಅವರು ತಿಳಿಸಿದರು.
ಕೆಲ ಪಟ್ಟಭದ್ರ ಹಿತಾಸಕ್ತಿಗಳ ಬಗ್ಗೆ ಪ್ರತಿಯೊಬ್ಬರು ಎಚ್ಚರವಾಗಿರಬೇಕು. ಬಸವಣ್ಣ, ಸಂಗೊಳ್ಳಿ ರಾಯಣ್ಣನನ್ನೆ ಶತ್ರುಗಳು ಬಿಡಲಿಲ್ಲ. ಮೊದಲು ಗ್ಯಾರಂಟಿ ನಿಲ್ಲಿಸುತ್ತಾರೆಂದು ಪುಕರು ಹಬ್ಬಿಸಿದ್ದರು. ಅದು ಆಗದಿದ್ದಾಗ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸಿದರು ಎಂದು ವಾಗ್ದಾಳಿ ನಡೆಸಿದರು.
ನಾನು ಅಧಿಕಾರದಲ್ಲಿ ಇರುವವರೆಗೆ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಹೇಗಾದರೂ ಮಾಡಿ ನನ್ನನ್ನು ಸಿಲುಕಿಸಬೇಕೆಂದು ಪ್ಲಾನ್ ಮಾಡಿದ್ದಾರೆ. ನನ್ನನ್ನು ಅಧಿಕಾರದಿಂದ ತೆಗೆಯಬೇಕೆಂದು ಹುನ್ನಾರ ನಡೆಸುತ್ತಿದ್ದಾರೆ. ಅದಕ್ಕೆ ನೀವು ಅವಕಾಶ ಮಾಡಿಕೊಡಬೇಡಿ ಎಂದು ಕಲಬುರ್ಗಿ ತಾಲೂಕಿನ ಕವಲಗ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.