ಬೆಳಗಾವಿ: ಇಲ್ಲಿನ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಇದೇ ವೇಳೇ ಅವರು ಮಾತನಾಡಿ ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಅವಮಾನಿಸಿದರು. ಈಗ ಚುನಾವಣೆ ಬಳಿಕ ಗ್ಯಾರಂಟಿಗಳು ನಿಂತೋಗತ್ತವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಿನ ವರ್ಷಕ್ಕೆ ಬೇಕಾಗುವ ಹಣವನ್ನು ನಾನು ಆಗಲೇ ತೆಗೆದಿಟ್ಟಿದ್ದೀವಿ ಎಂದರು.