ಬೆಂಗಳೂರು: ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರೋದು ಬಡವರಿಗಾಗಿ ಆಗಿದೆ. ಇಂತಹ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸೋದಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.
ಶಾಸಕ ಬಾಲಕೃಷ್ಣ ಅವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೇ ಮಾತ್ರವೇ ಗ್ಯಾರಂಟಿ ಯೋಜನೆ ಮುಂದುವರೆಯಲಿದೆ. ಇಲ್ಲವಾದಲ್ಲಿ ನಿಲ್ಲಲಿದೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಇಂದು ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯಿಸಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋದಿಲ್ಲ. ಗ್ಯಾರಂಟಿಗಳನ್ನು ಬಡವರಿಗಾಗಿ ಜಾರಿ ಮಾಡಿದ್ದೇವೆ. ಅವುಗಳು ಮುಂದುವರೆಯಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
‘ಗ್ಯಾರಂಟಿ ಯೋಜನೆ’ ಅನುಷ್ಠಾನಕ್ಕೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಕ್ರಮ: ‘ಪ್ರಗತಿ’ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ
ಬೆಂಗಳೂರು : జిಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ ಪ್ರಗತಿ ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು.
ಪ್ರಗತಿ ಮೊಬೈಲ್ ಅಪ್ಲಿಕೇಶನ್ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ ಮಾಡುತ್ತದೆ ಮತ್ತು ಅಧಿಕಾರಿಗಳು ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ ಭೇಟಿ ನೀಡುವುದರಿಂದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಪ್ಲಿಕೇಶನ್ ಅಗತ್ಯತೆಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಹಾಗೂ ಸರಿಯಾದ ಯೋಜನೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಮತ್ತು ನಿಧಿಯ ಪರಿಣಾಮಕಾರಿ ಬಳಕೆಗೆ ಸಹಾಯ ಮಾಡುತ್ತದೆ.
ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಚಾಲನೆ ನೀಡುವ ವೇಳೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪಯ ಮುಖ್ಯ ಕಾರ್ಯದರ್ಶಿ ಅತೀಕ್ ಅಹಮದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
BREAKING: ಬಿಹಾರದಲ್ಲಿ ‘ರಾಹುಲ್ ಗಾಂಧಿ’ ಕಾರಿನ ಮೇಲೆ ಕಲ್ಲು ತೂರಾಟ: ‘ಕಾರಿನ ಗ್ಲಾಸ್’ ಪುಡಿಪುಡಿ
ಮಂಗಳೂರಲ್ಲಿ ಫೆ.17 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ : ಡಿಸಿಎಂ ಡಿಕೆ ಸ್ಪಷ್ಟನೆ