Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಲೆಯ ಗೋಡೆಗೆ ಡಿಕ್ಕಿ ಹೊಡೆದು, ಹೊತ್ತಿ ಉರಿದ ಶಾಸಕ ಯೋಗೇಂದ್ರ ಸಿಂಗ್ ಬಾಬಾ ಕಾರು : ಅದೃಷ್ಟವಶಾತ್ ಪಾರು!

ಜನ ಸಮುದಾಯಕ್ಕೆ ಹತ್ತಿರವಾಗಿ ಕೆಲಸ ಮಾಡಿ: ಡಿಸಿಎಂ ಜಿ.ಪರಮೇಶ್ವರ

BIG NEWS: ಸಾರ್ವಜನಿಕರ ಕುಂದುಕೊರತೆ ಆಲಿಸಲು ಹೊಸ ಸಚಿವಾಲಯ ರಚನೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನ ಸಮುದಾಯಕ್ಕೆ ಹತ್ತಿರವಾಗಿ ಕೆಲಸ ಮಾಡಿ: ಡಿಸಿಎಂ ಜಿ.ಪರಮೇಶ್ವರ
KARNATAKA

ಜನ ಸಮುದಾಯಕ್ಕೆ ಹತ್ತಿರವಾಗಿ ಕೆಲಸ ಮಾಡಿ: ಡಿಸಿಎಂ ಜಿ.ಪರಮೇಶ್ವರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಒಳ್ಳೆಯ ಆಡಳಿತ ನೀಡುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಿದ್ದೇವೆ. ಸರ್ಕಾರದ ಯೋಜನೆಗಳು ನಿಗದಿತ ಸಮಯದೊಳಗೆ ಜನರಿಗೆ ತಲುಪಲು ಜವಬ್ದಾರಿ ಮತ್ತು ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಉಪ‌ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ‌ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಮೂರು ವರ್ಷಗಳಲ್ಲಿ ಎಲ್ಲ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿ, ಸರ್ಕಾರಕ್ಕೆ ಒಳ್ಳೆಯ ಹೆಸರು ತಂದಿದ್ದೀರಿ. ಅನೇಕ ಭರವಸೆಗಳನ್ನು ಈಡೇರಿಸಲಾಗಿದೆ. ನೂತನ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರವೂ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜನಸಮುದಾಯಕ್ಕೆ ಹತ್ತಿರವಾಗಿ ಕೆಲಸ ಮಾಡಬೇಕು. ನಿಮ್ಮ ಸೇವೆ ಜನಸಮುದಾಯಕ್ಕೆ ಅನುಕೂಲವಾಗಬೇಕು ಎಂದು ಅವರು ಹೇಳಿದರು.

ಯುವ ಸಮುದಾಯ ಸೂಕ್ಷ್ಮವಾಗಿ ನೋಡುತ್ತಿದೆ. ಯುವಕರ ಆಪೇಕ್ಷೆಯಂತೆ ಆಡಳಿತ ನೀಡಬೇಕು ಎಂಬುದು ಸರ್ಕಾರದ ದೃಷ್ಟಿಕೋನವಾಗಿದೆ. ಬರೀ ಭರವಸೆಗಳನ್ನು ಪೂರ್ಣಗೊಳಿಸುವುದಷ್ಟೆ ಅಲ್ಲ. ರಾಜ್ಯದ ಅಭಿವೃದ್ಧಿಗೆ ದೃಷ್ಟಿಕೋನ ನೀಡಬೇಕಿದೆ. ಕರ್ನಾಟಕ ಪ್ರಗತಿಪರ ರಾಜ್ಯ. ಎಲ್ಲರೂ ಕರ್ನಾಟಕದತ್ತ ಗಮನ ಹರಿಸುತ್ತಾರೆ. ಇದನ್ನು ನಾವು ಯಾವ ರೀತಿ ಸಾಕಾರಗೊಳಿಸಬೇಕು ಎಂಬುದು ಸಭೆಯ ಮೂಲ ಉದ್ದೇಶವಾಗಿದೆ ಎಂದರು.

ಅನೇಕ ಸಂದರ್ಭಗಳಲ್ಲಿ ಅಭಿವೃದ್ಧಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಗುರುತಿಸಲಾಗಿದೆ. ಆ ಅವಕಾಶ ಮತ್ತೆ ಬಂದಿದೆ. ಎಲ್ಲ ಮಾನದಂಡಗಳಲ್ಲಿಯೂ ನಮ್ಮ ರಾಜ್ಯ ಅಗ್ರಸ್ಥಾನದಲ್ಲಿರಬೇಕು.

ಸಾಮಾನ್ಯ ರೈತ ತಹಶೀಲ್ದಾರರ ಕಚೇರಿಗೆ ಹೋಗಿ, ತನ್ನ‌‌ ಕೆಲಸ‌ ಮುಗಿಸಿಕೊಂಡು ಸಂತೋಷದಿಂದ ಹೊರಬರಬೇಕು. ತನಗಾದ ಅನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ದೂರು ಕೊಡುವ ವ್ಯಕ್ತಿಗೆ ನ್ಯಾಯ ಸಿಗುತ್ತದೆ ಎಂಬ ಭರವಸೆಯಿಂದ ಸಮಾದಾನವಾಗಬೆಕು. ಈ ಕೆಲಸ ಅನೇಕ ಸಂದರ್ಭಗಳಲ್ಲಿ ಅಗುತ್ತಿಲ್ಲ‌. ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಕಡತ ವಿಲೇವಾರಿ ಆದರೆ ಸಾಕು, ಕೆಲಸ ಮುಗಿಯಿತು ಎಂಬ ಮನಸ್ಥಿತಿ ನಮ್ಮ ಅಧಿಕಾರಿಗಳಿಗೆ ಇದೆ . ಈ ರೀತಿಯ ಯೋಚನೆ ಬದಲಾಗಬೇಕು ಎಂದು ಹೇಳಿದರು.

ಒಟ್ಟು ಎಂಟು ವರ್ಷ ಪೊಲೀಸ್ ಇಲಾಖೆಯ ಜವಾಬ್ದಾರಿಯನನ್ನು ನಿಭಾಯಿಸಿದ್ದೇನೆ. ಪೊಲೀಸ್ ಇಲಾಖೆಯು ಸರ್ಕಾರದ ಮುಖ. ಉತ್ತಮವಾಗಿ ಕೆಲಸ ಮಾಡಬೇಕು. ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ ಯಾವುದೇ ಕೋಮು ಸಂಘರ್ಷ, ಗಲಭೆಗಳು ಆಗದಂತೆ ಕೆಲಸ‌ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗದಲ್ಲಿ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಸ್ಥಾಪನೆಯಾದ ಬಳಿಕ ಎಲ್ಲ ರೀತಿಯ ಗಲಭೆಗಳು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ವಹಿಸಿ ಪೊಲೀಸ್ ಇಲಾಖೆ ಕೆಲಸ ಮಾಡಬೇಕಿದೆ‌ ಎಂದರು.

ಮಾದಕ ವಸ್ತುಗಳ ವಿರುದ್ಧ ಕಳೆದ ಮೂರು ವರ್ಷಗಳಿಂದ ಸಮರ ಸಾರಲಾಗಿದೆ. ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಲಾಗಿದೆ. ಯುವಕರನ್ನು ಭವಿಷ್ಯವನ್ನು ಹಾಳು ಮಾಡುತ್ತಿರುವ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಬೇಕು. ಡ್ರಗ್ಸ್ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ರಾಮಲಿಂಗರೆಡ್ಡಿ, ಈಶ್ವರ್ ಖಂಡ್ರೆ, ಯು.ಟಿ.ಖಾದರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ ಅವರು ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

BIG NEWS: ಸಾರ್ವಜನಿಕರ ಕುಂದುಕೊರತೆ ಆಲಿಸಲು ಹೊಸ ಸಚಿವಾಲಯ ರಚನೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

Share. Facebook Twitter LinkedIn WhatsApp Email

Related Posts

BIG NEWS: ಸಾರ್ವಜನಿಕರ ಕುಂದುಕೊರತೆ ಆಲಿಸಲು ಹೊಸ ಸಚಿವಾಲಯ ರಚನೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

1 Min Read

ಯಾವ ಸಚಿವರು, ಶಾಸಕರ ಒತ್ತಡಕ್ಕೆ ಮಣಿಯದೇ ಕೆಲಸ ಮಾಡಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ

1 Min Read

ಒತ್ತಡಕ್ಕೆ ಮಣಿಯದೆ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ!

2 Mins Read
Recent News

ಶಾಲೆಯ ಗೋಡೆಗೆ ಡಿಕ್ಕಿ ಹೊಡೆದು, ಹೊತ್ತಿ ಉರಿದ ಶಾಸಕ ಯೋಗೇಂದ್ರ ಸಿಂಗ್ ಬಾಬಾ ಕಾರು : ಅದೃಷ್ಟವಶಾತ್ ಪಾರು!

ಜನ ಸಮುದಾಯಕ್ಕೆ ಹತ್ತಿರವಾಗಿ ಕೆಲಸ ಮಾಡಿ: ಡಿಸಿಎಂ ಜಿ.ಪರಮೇಶ್ವರ

BIG NEWS: ಸಾರ್ವಜನಿಕರ ಕುಂದುಕೊರತೆ ಆಲಿಸಲು ಹೊಸ ಸಚಿವಾಲಯ ರಚನೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಯಾವ ಸಚಿವರು, ಶಾಸಕರ ಒತ್ತಡಕ್ಕೆ ಮಣಿಯದೇ ಕೆಲಸ ಮಾಡಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ

State News
KARNATAKA

ಜನ ಸಮುದಾಯಕ್ಕೆ ಹತ್ತಿರವಾಗಿ ಕೆಲಸ ಮಾಡಿ: ಡಿಸಿಎಂ ಜಿ.ಪರಮೇಶ್ವರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು : ಒಳ್ಳೆಯ ಆಡಳಿತ ನೀಡುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಿದ್ದೇವೆ. ಸರ್ಕಾರದ ಯೋಜನೆಗಳು ನಿಗದಿತ ಸಮಯದೊಳಗೆ ಜನರಿಗೆ ತಲುಪಲು…

BIG NEWS: ಸಾರ್ವಜನಿಕರ ಕುಂದುಕೊರತೆ ಆಲಿಸಲು ಹೊಸ ಸಚಿವಾಲಯ ರಚನೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಯಾವ ಸಚಿವರು, ಶಾಸಕರ ಒತ್ತಡಕ್ಕೆ ಮಣಿಯದೇ ಕೆಲಸ ಮಾಡಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ

ಒತ್ತಡಕ್ಕೆ ಮಣಿಯದೆ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.