ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ 7 ಜಿಟಿಟಿಸಿ ಸ್ಥಾಪನೆ ಕಾಮಗಾರಿಯನ್ನು ಆರಂಭಿಸಲಾಗುತ್ತೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 32 ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್‌ನಲ್ಲಿ ಹೊಸದಾಗಿ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲಾಗುವುದು. ಇಂಡಿ, ಮಧುಗಿರಿ, ಕಂಪ್ಲಿ, ರಾಯಚೂರು ಗ್ರಾಮೀಣ, ಸಿಂಧನೂರಿನಲ್ಲಿ ಜಿಟಿಟಿಸಿ ಪ್ರಾರಂಭಿಸಲು ಸ್ಥಳ ಗುರುತಿಸಲಾಗಿದ್ದು, ಕಾಮಗಾರಿ ಪ್ರಾರಂಭಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು. ಸಂಡೂರು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪ್ರಕ್ರಿಯೆ ಆದಷ್ಟು ಬೇಗನೆ ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 32 ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್‌ನಲ್ಲಿ ಹೊಸದಾಗಿ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲಾಗುವುದು. ಇಂಡಿ, ಮಧುಗಿರಿ, ಕಂಪ್ಲಿ, ರಾಯಚೂರು ಗ್ರಾಮೀಣ, ಸಿಂಧನೂರಿನಲ್ಲಿ ಜಿಟಿಟಿಸಿ ಪ್ರಾರಂಭಿಸಲು ಸ್ಥಳ ಗುರುತಿಸಲಾಗಿದ್ದು, ಕಾಮಗಾರಿ… pic.twitter.com/B7L01HcsSx
— DIPR Karnataka (@KarnatakaVarthe) November 26, 2025
BIG NEWS : ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ‘CM’ ಮಾಡುತ್ತೇವೆ : ಸಚಿವ ಕೆಜೆ ಜಾರ್ಜ್ ಹೇಳಿಕೆ








