ನವದೆಹಲಿ: ಲೋಕಸಭೆಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ 2024-25 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸೋದಕ್ಕೆ ಆರಂಭಿಸಿದ್ದಾರೆ. ಈ ವೇಳೆ ಮಾತನಾಡಿದಂತ ಅವರು 2047ರ ವೇಳೆಗೆ ಭಾರತವನ್ನು ವಿಕ್ಷಿತ್ ಭಾರತವನ್ನಾಗಿ ಮಾಡಲು ಶ್ರಮಿಸೋದಾಗಿ ತಿಳಿಸಿದರು.
ಇಂದು ಲೋಕಸಭೆಯಲ್ಲಿ ಕೇಂದ್ರ ಮಧ್ಯಂತರ ಬಜೆಟ್ ಭಾಷಣ ಆರಂಭಿಸಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಜನರು ದೊಡ್ಡ ಜನಾದೇಶದೊಂದಿಗೆ ಸರ್ಕಾರವನ್ನು ಆಶೀರ್ವದಿಸಿದ್ದಾರೆ. ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮಂತ್ರವನ್ನು ಸರ್ಕಾರ ಬಲಪಡಿಸಿದೆ ಎಂದರು.
ಕನಿಷ್ಠ ಬೆಂಬಲ ಬೆಲೆಗಳನ್ನು ನಿಯತಕಾಲಿಕವಾಗಿ ಹೆಚ್ಚಿಸಲಾಗಿದೆ. 2047ರ ವೇಳೆಗೆ ಭಾರತವನ್ನು ‘ವಿಕ್ಷಿತ್ ಭಾರತ’ವನ್ನಾಗಿ ಮಾಡಲು ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದರು.
ಈ ಬಾರಿಯ ಬಜೆಟ್ 4 ಕೇಂದ್ರೀಕೃತ ವಿಭಾಗಗಳನ್ನು ಒಳಗೊಂಡಿದೆ. ಅವುಗಳೆಂದರೇ ಗರೀಬ್, ಮಹಿಳಾ, ಯುವಕರು ಮತ್ತು ರೈತರು ಎಂದರು.
ನಮ್ಮ ಯುವ ದೇಶವು ಉನ್ನತ ಆಕಾಂಕ್ಷೆಗಳು, ಅದರ ವರ್ತಮಾನದ ಬಗ್ಗೆ ಹೆಮ್ಮೆ ಮತ್ತು ಉಜ್ವಲ ಭವಿಷ್ಯದ ಭರವಸೆ ಮತ್ತು ವಿಶ್ವಾಸವನ್ನು ಹೊಂದಿದೆ. ನಮ್ಮ ಸರ್ಕಾರವು ತನ್ನ ಅದ್ಭುತ ಕೆಲಸದ ಆಧಾರದ ಮೇಲೆ ಮತ್ತೊಮ್ಮೆ ಅದ್ಭುತ ಜನಾದೇಶದೊಂದಿಗೆ ಜನರಿಂದ ಆಶೀರ್ವದಿಸಲ್ಪಡುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ತಿಳಿಸಿದರು.