Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಸ್ಟ್ ಆಫೀಸ್ ಆರ್‌ಡಿ ಯೋಜನೆ: ಪ್ರತಿದಿನ 300 ರೂ. ಉಳಿಸಿ, 4.40 ಲಕ್ಷ ರೂ. ಬಡ್ಡಿ ಪಡೆಯಿರಿ!

09/04/2026 8:32 PM

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM

ನದಿಪಾತ್ರದಲ್ಲಿ ಚಿನ್ನದ ಭೇಟೆ! ಭಾರತದ ಈ 3 ನದಿಗಳಲ್ಲಿ ಇಂದಿಗೂ ಸಿಗುತ್ತಿದೆ ಅಪ್ಪಟ ಬಂಗಾರ: ಇಲ್ಲಿದೆ ಅಚ್ಚರಿಯ ಮಾಹಿತಿ

09/04/2026 8:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮೈಸೂರಲ್ಲಿ 150 ಎಕರೆಯಲ್ಲಿ ‘ವಿಶ್ವದರ್ಜೆಯ ಫಿಲಂ ಸಿಟಿ’ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ
KARNATAKA

BREAKING : ಮೈಸೂರಲ್ಲಿ 150 ಎಕರೆಯಲ್ಲಿ ‘ವಿಶ್ವದರ್ಜೆಯ ಫಿಲಂ ಸಿಟಿ’ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow0502/03/2025 5:28 AM

ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದು ಆಶಿಸಿದರು.

ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಸಂಪತ್ತಿನ ಈ ವಿಪರೀತ ಅಸಮಾನ ಹಂಚಿಕೆ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದರು.

ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ಧ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಇವರ ಸಿನಿಮಾಗಳು ಇಷ್ಟ ಆಗುತ್ತಿದ್ದವು ಎಂದು ವಿವರಿಸಿದರು.ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು ಎಂದರು.

ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ ಎಂದರು.
ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದು ಹಾರೈಸಿದರು.

ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ.
ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ… pic.twitter.com/kTTmvPAotY

— Siddaramaiah (@siddaramaiah) March 1, 2025

Share. Facebook Twitter LinkedIn WhatsApp Email

Related Posts

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM2 Mins Read

ಶಿವಮೊಗ್ಗ: ದ್ವಿತೀಯ ಪಿಯುಸಿಯಲ್ಲಿ ಸೊರಬದ ಉಳವಿಯ ಪ್ರಕಾಶ್ ಪುತ್ರ ಶಂಕರ್ 600ಕ್ಕೆ 542 ಅಂಕ

09/04/2026 8:14 PM1 Min Read

ರೈಲ್ವೆ ಸಿಬ್ಬಂದಿಯ ಪ್ರಾಮಾಣಿಕತೆ: ಪ್ರಯಾಣಿಕರ ಲಕ್ಷಾಂತರ ಮೌಲ್ಯದ ಬ್ಯಾಗ್ ಸುರಕ್ಷಿತವಾಗಿ ವಾಪಸ್!

09/04/2026 7:06 PM2 Mins Read
Recent News

ಪೋಸ್ಟ್ ಆಫೀಸ್ ಆರ್‌ಡಿ ಯೋಜನೆ: ಪ್ರತಿದಿನ 300 ರೂ. ಉಳಿಸಿ, 4.40 ಲಕ್ಷ ರೂ. ಬಡ್ಡಿ ಪಡೆಯಿರಿ!

09/04/2026 8:32 PM

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM

ನದಿಪಾತ್ರದಲ್ಲಿ ಚಿನ್ನದ ಭೇಟೆ! ಭಾರತದ ಈ 3 ನದಿಗಳಲ್ಲಿ ಇಂದಿಗೂ ಸಿಗುತ್ತಿದೆ ಅಪ್ಪಟ ಬಂಗಾರ: ಇಲ್ಲಿದೆ ಅಚ್ಚರಿಯ ಮಾಹಿತಿ

09/04/2026 8:27 PM

ವಿಧಾನಸಭಾ ಚುನಾವಣೆ 2026: ಅಸ್ಸಾಂ, ಪುದುಚೇರಿಯಲ್ಲಿ ಶೇ. 80ಕ್ಕೂ ಹೆಚ್ಚು ಮತದಾನ! ಕೇರಳದಲ್ಲಿ ಶೇ. 75ರಷ್ಟು ದಾಖಲೆ

09/04/2026 8:25 PM
State News
KARNATAKA

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

By kannadanewsnow0909/04/2026 8:28 PM KARNATAKA 2 Mins Read

ಹೊಸದುರ್ಗ: ತಾಲ್ಲೂಕಿನ ಕಬ್ಬಳ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಕತ್ತಿಕಲ್ಲಾಂಭ ದೇವಿಯ ರಥೋತ್ಸವ ಹಾಗೂ ಸಿಡಿ ಉತ್ಸವವು ಗುರುವಾರ ಸಾವಿರಾರು…

ಶಿವಮೊಗ್ಗ: ದ್ವಿತೀಯ ಪಿಯುಸಿಯಲ್ಲಿ ಸೊರಬದ ಉಳವಿಯ ಪ್ರಕಾಶ್ ಪುತ್ರ ಶಂಕರ್ 600ಕ್ಕೆ 542 ಅಂಕ

09/04/2026 8:14 PM

ರೈಲ್ವೆ ಸಿಬ್ಬಂದಿಯ ಪ್ರಾಮಾಣಿಕತೆ: ಪ್ರಯಾಣಿಕರ ಲಕ್ಷಾಂತರ ಮೌಲ್ಯದ ಬ್ಯಾಗ್ ಸುರಕ್ಷಿತವಾಗಿ ವಾಪಸ್!

09/04/2026 7:06 PM

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಮೊದಲ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ

09/04/2026 7:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.