ಮೈಸೂರು : ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಹಬ್ಬದ ಹಿನ್ನೆಲೆ ಅರಮನೆಯಲ್ಲಿ ಎಲ್ಲಾ ತಯಾರಿ ಜೋರಾಗಿ ನಡೆಯುತ್ತಿದೆ.
ಹೌದು, ಮೈಸೂರು ದಸರಾ (Mysuru Dasara 2024) ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಸೆಪ್ಟೆಂಬರ್ 27ರಂದು ಸಿಂಹಾಸನ ಜೋಡಣೆ ಕೆಲಸ ನಡೆಯಲಿದೆ. ಅರಮನೆಯ ನೆಲಮಾಳಿಗೆಯ ಸ್ಟ್ರಾಂಗ್ ರೂಮ್ನಲ್ಲಿರುವ ರತ್ನ ಖಚಿತ ಸಿಂಹಾಸನವನ್ನು ದರ್ಬಾರ್ ಹಾಲ್ಗೆ ತರಲಾಗುತ್ತದೆ. ಇದಕ್ಕೂ ಮುನ್ನ ಹೋಮ ಶಾಂತಿ ಬಳಿಕವೇ ಸ್ಟ್ರಾಂಗ್ ರೂಮ್ ತೆರೆಯಲಾಗುತ್ತದೆ. ಈ ಹಿನ್ನೆಲೆ ಅರಮನೆ ಪ್ರವೇಶಕ್ಕೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.
ಅಕ್ಟೋಬರ್ 3ರಂದು ಖಾಸಗಿ ದರ್ಬಾರ್ ಪೂಜಾ ಕೈಂಕರ್ಯ ನಡೆಯುವುದರಿಂದ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ, ಅ. 11ರಂದು ಆಯುಧ ಪೂಜೆ, ಅ.12 ರಂದು ವಿಜಯದಶಮಿಯಂದು ಇಡೀ ದಿನ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.