ಬೆಂಗಳೂರು : ವಿಶ್ವ ಅಂಗಾಂಗ ದಾನ ದಿನಾಚರಣೆ ಅಂಗವಾಗಿ ಆಗಸ್ಟ್ 13 ರ ಇಂದು ಬೆಂಗಳೂರಿನಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ ಸತ್ತ ಮೇಲೆ ನಮ್ಮ ದೇಹದಾನದಿಂದ 8 ಜನ ಬದುಕುತ್ತಾರೆ ʼ ಪ್ರತಿಕ್ರಿಯೆ
ಸತ್ತ ಮೇಲೆ ನಮ್ಮ ದೇಹದಾನ ಮಾಡಬೇಕು ಅಂಗಾಗ ದಾನ ಮಾಡಿದರೆ ನಾವು ಸತ್ತಮೇಲು ಬದುಕಿರುತ್ತೇವೆ. ಯುವಕರು ಅಂಗಾಂಗ ದಾನ ಮಾಡಬೇಕು ನಾನು ಕೂಡಾ ಅಂಗಾಂಗ ದಾನಕ್ಕೆ ಸಹಿ ಮಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಇಂದು ರಾಜ್ಯಾಂದ್ಯ ವಿಶ್ವ ಅಂಗಾಂಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇನ್ನಿತರರು ಕೂಡ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ.