ನವದೆಹಲಿ : ಖ್ಯಾತ ತಬಲಾ ವಾದಕ ಮತ್ತು ಉಸ್ತಾದ್ ಅಲ್ಲಾ ರಖಾ ಅವರ ಹಿರಿಯ ಪುತ್ರ ಉಸ್ತಾದ್ ಜಾಕೀರ್ ಹುಸೇನ್ ಪ್ರಸ್ತುತ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇದೀಗ ಅವರು ನಿಧನರಾಗಿದ್ದಾರೆ ಬಲ್ಲ ಮೂಲಗಳಿಂದ ಎಂದು ತಿಳಿದುಬಂದಿದೆ.ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವ್ರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಸಧ್ಯ ಜಾಕೀರ್ ಹುಸೇನ್ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಅಂದ್ಹಾಗೆ, ಜಾಕೀರ್ ಹುಸೇನ್ ಅವ್ರ ಹೆಸರನ್ನ ಸಂಗೀತ ಜಗತ್ತಿನಲ್ಲಿ ಗೌರವದಿಂದ ತೆಗೆದುಕೊಳ್ಳಲಾಗುತ್ತದೆ. 9 ಮಾರ್ಚ್ 1951 ರಂದು ಮುಂಬೈನಲ್ಲಿ ಜನಿಸಿದ ಉಸ್ತಾದ್ ಜಾಕಿರ್ ಹುಸೇನ್ ಅವರಿಗೆ 1988ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಮತ್ತು 2023ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನ ನೀಡಲಾಯಿತು. ಜಾಕಿರ್ ಹುಸೇನ್ ಮೂರು ಗ್ರ್ಯಾಮಿ ಪ್ರಶಸ್ತಿಗಳನ್ನ ಸಹ ಪಡೆದಿದ್ದಾರೆ.