ಬೆಂಗಳೂರು: ನಿನ್ನೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಗಾಂಧೀಜಿಯವರ ( Gandhiji ) ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ, ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಅವರು, ಶೂ ಧರಿಸೋ ಸಲುವಾಗಿ ಅದೇ ಗಾಂಧೀಜಿ ಪೋಟೋವಿದ್ದಂತ ಚೇರ್ ಅನ್ನೇ ಆಸರೆಯಾಗಿ ಹಿಡಿದಿದ್ದ ವೀಡಿಯೋ ವೈರಲ್ ಆಗಿತ್ತು. ಗೃಹ ಸಚಿವರ ಈ ನಡೆಗೆ ತೀವ್ರ ಆಕ್ಷೇಪ ಕೂಡ ಕೇಳಿ ಬಂದಿತ್ತು. ಇದೀಗ ಕಾಂಗ್ರೆಸ್ ಗೃಹ ಸಚಿವರಿಗೆ ಬೂಟು ಹಾಕಿಕೊಳ್ಳಲು ಗಾಂಧಿ ಆಸರೆಯೇ ಎಂಬುದಾಗಿ ಪ್ರಶ್ನಿಸಿದೆ.
Job Alert: ಸಾಗರ, ಹೊಸನಗರ ತಾಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ
ಈ ಕುರಿತಂತೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ( Karnataka Congress ) ಗೃಹಸಚಿವರಿಗೆ ಬೂಟು ಹಾಕಿಕೊಳ್ಳಲು ಗಾಂಧಿ ಆಸರೆಯೇ? ಮಹಾತ್ಮ ಗಾಂಧಿಯವರಿಗೆ ಈ ರೀತಿಯಲ್ಲಿ ಅವಮಾನಿಸುವ ನಿರ್ದೇಶನ ನಾಗಪುರದಿಂದ ಬಂದಿತ್ತೇ ಅರಗ ಜ್ಞಾನೇಂದ್ರ ಅವರೇ? ಕಾನೂನು ಸುವ್ಯವಸ್ಥೆ ನಿರ್ವಹಿಸುವುದನ್ನೂ ತಿಳಿಯದ, ಮಹನೀಯರಿಗೆ ಗೌರವಿಸುವುದನ್ನೂ ಅರಿಯದ ಸಚಿವರು ದೇಶಭಕ್ತಿಯ ಬಗ್ಗೆ ಭಾಷಣ ಬಿಗಿಯುವುದು ಹಾಸ್ಯಾಸ್ಪದ ಎಂಬುದಾಗಿ ವಾಗ್ಧಾಳಿ ನಡೆಸಿದೆ.
ಗೃಹಸಚಿವರಿಗೆ ಬೂಟು ಹಾಕಿಕೊಳ್ಳಲು ಗಾಂಧಿ ಆಸರೆಯೇ?
ಮಹಾತ್ಮ ಗಾಂಧಿಯವರಿಗೆ ಈ ರೀತಿಯಲ್ಲಿ ಅವಮಾನಿಸುವ ನಿರ್ದೇಶನ ನಾಗಪುರದಿಂದ ಬಂದಿತ್ತೇ @JnanendraAraga ಅವರೇ?
ಕಾನೂನು ಸುವ್ಯವಸ್ಥೆ ನಿರ್ವಹಿಸುವುದನ್ನೂ ತಿಳಿಯದ, ಮಹನೀಯರಿಗೆ ಗೌರವಿಸುವುದನ್ನೂ ಅರಿಯದ ಸಚಿವರು ದೇಶಭಕ್ತಿಯ ಬಗ್ಗೆ ಭಾಷಣ ಬಿಗಿಯುವುದು ಹಾಸ್ಯಾಸ್ಪದ.#NakliDeshBhakts pic.twitter.com/xZgdmDr3DV
— Karnataka Congress (@INCKarnataka) August 16, 2022
BIGG NEWS: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಖಂಡನೆ