ಬೆಂಗಳೂರು: ನಿನ್ನೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಗಾಂಧೀಜಿಯವರ ( Gandhiji ) ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ, ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಅವರು, ಶೂ ಧರಿಸೋ ಸಲುವಾಗಿ ಅದೇ ಗಾಂಧೀಜಿ ಪೋಟೋವಿದ್ದಂತ ಚೇರ್ ಅನ್ನೇ ಆಸರೆಯಾಗಿ ಹಿಡಿದಿದ್ದ ವೀಡಿಯೋ ವೈರಲ್ ಆಗಿತ್ತು. ಗೃಹ ಸಚಿವರ ಈ ನಡೆಗೆ ತೀವ್ರ ಆಕ್ಷೇಪ ಕೂಡ ಕೇಳಿ ಬಂದಿತ್ತು. ಇದೀಗ ಕಾಂಗ್ರೆಸ್ ಗೃಹ ಸಚಿವರಿಗೆ ಬೂಟು ಹಾಕಿಕೊಳ್ಳಲು ಗಾಂಧಿ ಆಸರೆಯೇ ಎಂಬುದಾಗಿ ಪ್ರಶ್ನಿಸಿದೆ.

Job Alert: ಸಾಗರ, ಹೊಸನಗರ ತಾಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ

ಈ ಕುರಿತಂತೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ( Karnataka Congress ) ಗೃಹಸಚಿವರಿಗೆ ಬೂಟು ಹಾಕಿಕೊಳ್ಳಲು ಗಾಂಧಿ ಆಸರೆಯೇ? ಮಹಾತ್ಮ ಗಾಂಧಿಯವರಿಗೆ ಈ ರೀತಿಯಲ್ಲಿ ಅವಮಾನಿಸುವ ನಿರ್ದೇಶನ ನಾಗಪುರದಿಂದ ಬಂದಿತ್ತೇ ಅರಗ ಜ್ಞಾನೇಂದ್ರ  ಅವರೇ? ಕಾನೂನು ಸುವ್ಯವಸ್ಥೆ ನಿರ್ವಹಿಸುವುದನ್ನೂ ತಿಳಿಯದ, ಮಹನೀಯರಿಗೆ ಗೌರವಿಸುವುದನ್ನೂ ಅರಿಯದ ಸಚಿವರು ದೇಶಭಕ್ತಿಯ ಬಗ್ಗೆ ಭಾಷಣ ಬಿಗಿಯುವುದು ಹಾಸ್ಯಾಸ್ಪದ ಎಂಬುದಾಗಿ ವಾಗ್ಧಾಳಿ ನಡೆಸಿದೆ.

BIGG NEWS: ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಶಾಸಕ ರಾಜಕುಮಾರ್‌ ಪಾಟೀಲ್‌ ತೇಲ್ಕೂರ್‌ ಖಂಡನೆ

Share.
Exit mobile version