ಬೆಂಗಳೂರು : ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದೀಗ ಪತ್ರ ಬರೆದಿದ್ದಾರೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ರ ಬರೆದಿದ್ದು, ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧುಕೋಕಿಲ ಹಾಗೂ ಅರ್ಜುನ್ ಜನ್ಯಾಗೆ ಪತ್ರ ಬರೆದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ಕಾವೇರಿಯ ಮೆರಗನ್ನು ಹೆಚ್ಚಿಸಲು ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆಗೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಕಾವೇರಿ ಆರತಿಯ ವೇಳೆ ಆಯ್ಕೆಯಾದ ಹಾಡು ಪ್ರಸಾರ ಮಾಡಲು ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಿಗೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಬೆಂಗಳೂರು ಜಲ ಮಂಡಳಿ ಮತ್ತು ಕಾವೇರಿ ಆರತಿ ಸಮಿತಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.