ದಾವಣಗೆರೆ/ಹರಿಹರ: ಸಾಹಿತಿ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾದ ಪರಿಣಾಮ ಆಸ್ಪತ್ರೆಗೆ ದಾಖಲು ಚಿಕಿತ್ಸೆ ಮಾಡಿದ ಬಳಿಕ ಅವರು ಮತ್ತೆ ಬೆಂಗಳೂರಿಗೆ ವಾಪಸ್ಸಾದ ಘಟನೆ ನಡೆದಿದೆ.
ಇಂದು ಅವರು ದಾವಣಗೆರೆಯಲ್ಲಿ ವಿಚಾರ ಸಂಕಿರಣವೊಂದರಲ್ಲಿ ಭಾಗವಹಿಸಿದ ಬಳಿಕ ವಿಶ್ರಾಂತಿ ಪಡೆಯಲೆಂದು ಪ್ರವಾಸಿ ಮಂದಿರಕ್ಕೆ ತೆರಳಿದ್ದ ವೇಳೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ವೇಳೇ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಳಿಕ ಅವರ ಆರೋಗ್ಯದಲ್ಲಿ ಯಾವುದೇ ತೊಂದ್ರೆ ಕಾಣದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ ಬಳಿಕ ಅವರು ಬೆಂಗಳೂರಿಗೆ ವಾಪಸ್ಸದಾರು ಎನ್ನಲಾಗಿದೆ.