ಬೆಂಗಳೂರು: ಡಾ.ಚಂದ್ರಶೇಖರ ಕಂಬಾರ ಅವರ ಸಾಂಬಶಿವ ಪ್ರಹಸನ ನಾಟಕವನ್ನು ಅಸಹ್ಯಕರವಾಗಿ ತಿರುಚಿ ಪ್ರದರ್ಶನ ಸಂಬಂಧ, ಇದೀಗ ಸಂಬಂಧ ಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಕ್ಕಾಗಿ ಪೊಲೀಸರಿಗೆ ದೂರು ನೀಡಲಾಗಿದೆ.

ಈ ಸಂಬಂಧ ಮೈಸೂರು ಪೊಲೀಸ್ ಕಮೀಷನರ್ ಅವರಿಗೆ ಪತ್ರ ಬರೆದಿರುವಂತ ಡಾ.ಚಂದ್ರಶೇಖರ ಕಂಬಾರ ಅವರು, ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ ಸಾಂಬಶಿವ ಪ್ರಹಸನವನ್ನು ಅಸಹ್ಯವಾಗಿ ತಿರುಚಿ ಪ್ರದರ್ಶಿಸಿರುವ ಬಗ್ಗೆ ನನಗೆ ತುಂಬಾ ವಿಷಾಧವಾಗಿದೆ. ನನ್ನ ಅನುಮತಿ ಕೇಳದೇ ನಾಚಕವನ್ನು ಪ್ರದರ್ಶನಕ್ಕೆ ಅವಕಾಶ ಕೊಟ್ಟಿರುವುದು ವಿಷಾಧಕರ. ನನ್ನ ಯಾವುದೇ ನಾಟಕಗಳಲ್ಲಿ ವ್ಯಕ್ತಿಗತ ನಿಂದನೆ ಇರುವುದು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನೂ ಅನುಮತಿ ಇಲ್ಲದೇ ನಾಟಕವನ್ನು ಪ್ರದರ್ಶಿಸಿದ್ದಕ್ಕೆ, ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟವರಿಗೂ ಮತ್ತು ಇಲ್ಲದ ಸಾಹಿತ್ಯವನ್ನು ಸೇರಿಸಿದ್ದಕ್ಕೆ ನಿರ್ದೇಶಕರ ಮೇಲೂ ಹಾಗೂ ಈ ಅಹಿತರಕ ವಾತಾವರಣಕ್ಕೆ ಕಾರಣರಾದ ಸಂಬಂಧಪಟ್ಟ ಎಲ್ಲರ ಮೇಲೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

Share.
Exit mobile version