ಬೆಂಗಳೂರು: ಕೆಇಎಯಿಂದ 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, ಲಿಖಿತ ಪರೀಕ್ಷೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.
ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ ಒಇ 22 ಪಿಇಐ 2024 ದಿನಾಂಕ 22-02-2024 ರನ್ವಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿರುತ್ತದೆ. ಅದರಂತ ದಿನಾಂಕ 08.05.2024 ರಂದು ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು ಎಂದಿದ್ದಾರೆ.
ಆದರೆ ದೇಶಾದ್ಯಂತ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ದಿನಾಂಕ 08.05.2024 ರಂದು ನಡೆಸಲು ತೀರ್ಮಾನಿಸಲಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 364 `ಭೂಮಾಪಕರ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ