ಯಾದಗಿರಿ : ಬಡವರಿಗಾಗಿ ರಾಜ್ಯ ಸರ್ಕಾರ ಪಡಿತರ ಅಕ್ಕಿ ವಿತರಣೆ ಯೋಜನೆಯ ದಾರಿ ಮಾಡಿದ್ದು ಆದರೆ ಅಲ್ಲಲ್ಲಿ ಕಳ್ಳತನದಿಂದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. ಪೊಲೀಸರು ಹಾಗೂ ಅಧಿಕಾರಿಗಳು ಎಷ್ಟೇ ಕಠಿಣ ಕ್ರಮ ತೆಗೆದುಕೊಂಡರು ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತಿದೆ.
ಇದೀಗ ಯಾದಗಿರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 15 ಕ್ವಿಂಟಲ್ ಪಡಿತರ ಅಕ್ಕಿಯನ್ನು ಆಹಾರ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಶಹಪುರದಲ್ಲಿ 15 ಕ್ವಿಂಟಲ್ ಅಕ್ಕಿಯನ್ನು ಇದೀಗ ಜಪ್ತಿ ಮಾಡಿಕೊಂಡಿದ್ದಾರೆ.
ಬೋರ್ಡಿನ ಒಂಟಿ ಸೈಯದ್ ಮನೆಯಲ್ಲಿದ್ದ ಅಕ್ಕಿಯನ್ನು ಇದೀಗ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿಯನ್ನು ವಶಪಡಿಸಿಕೊಂಡಿದ್ದು ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ