ಯಾದಗಿರಿ : ಬಡವರಿಗಾಗಿಯೇ ಜಾರಿಗೆ ತಂದ ಅನ್ನಭಾಗ್ಯ ಯೋಜನೆಯಿಂದ ಬಡವರಿಗೆ ಎಷ್ಟರ ಮಟ್ಟಿಗೆ ಅಕ್ಕಿ ತಲುಪುತ್ತದೆಯೋ ಗೊತ್ತಿಲ್ಲ. ಆದರೆ ಅಕ್ಕಿ ಕಳ್ಳರು ಅಕ್ರಮವಾಗಿ ಈಗಲೂ ಸಹ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಬೇರೆ ರಾಜ್ಯಗಳಿಗೆ ಸಾಗಿಸುತ್ತಿದ್ದು, ಇದೀಗ ಯಾದಗಿರಿಯಲ್ಲಿ 5 ಲಕ್ಷ ಮೌಲ್ಯದ 280 ಅನ್ನಭಾಗ್ಯ ಅಕ್ಕಿ ಚೀಲಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹೌದು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಬಳಿ ಲಾರಿ ಸಮೇತ ಅನ್ನಭಾಗ್ಯ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಭೀಮರಾಯನ ಗುಡಿ ಬಳಿ ಸುಮಾರು 5 ಲಕ್ಷ ಮೌಲ್ಯದ 280 ಅಕ್ಕಿ ಚೀಲಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಕಲ್ಬುರ್ಗಿಯಿಂದ ಲಾರಿಯು ಹೈದರಾಬಾದ್ ಕಡೆಗೆ ತೆರಳುತ್ತಿತ್ತು. ಈ ವೇಳೆ ದಾಳಿ ಮಾಡಿದ ಪೊಲೀಸರು, ಲಾರಿ ವಶಕ್ಕೆ ಪಡೆದು ಆಹಾರ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಲ್ಲದೆ ಲಾರಿ ಚಾಲಕ ರಾಜು ರಾಥೋಡ್ ವಿರುದ್ಧ ಕೂಡ ಪ್ರಕರಣ ದಾಖಲಾಗಿದೆ.