ಯಾದಗಿರಿ : ಜಿಲ್ಲೆಯ ಹುಣಸಗಿ ತಾಲೂಕಿನ ಹಗರಟಗಿ ಗ್ರಾಮದಲ್ಲಿ ಮಕ್ಕಳಿಗೆ ನೀಡಬೇಕಿದ್ದ ಮೊಟ್ಟೆ ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಗರಟಗಿ ಅಂಗನವಾಡಿ ಕಾರ್ಯಕರ್ತೆ ಉಮಾದೇವಿಯನ್ನು ಇದೀಗ ಅಮಾನತು ಮಾಡಲಾಗಿದೆ.
ಹೌದು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಹಗರಟಗಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಉಮಾದೇವಿ ಕೆಳತಿಂಗಳಿಂದ ಕಾಳಸಂತೆಯಲ್ಲಿ ಮೊಟ್ಟೆ ಮಾರುತಿದ್ದರು. ಅದರ ಜೊತೆಗೆ ಅಕ್ಕಿ, ಗೋಧಿ, ರವೆ, ಅಡುಗೆ ಎಣ್ಣೆ, ಬೆಲ್ಲ, ಬೆಳೆ ಸಹ ಮಾರಾಟ ಮಾಡುತ್ತಿದ್ದಳು. ಆಹಾರ ಪದಾರ್ಥ ಮಾರಾಟದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿಯಲಾಗಿದೆ.ಹಾಗಾಗಿ ಇದೀಗ ಉಮಾದೇವಿಯನ್ನು ಅಮಾನತು ಮಾಡಲಾಗಿದೆ.
ಹಗರಟಗಿ ಗ್ರಾಮದ ಅಂಗನವಾಡಿ ಕೇಂದ್ರ-2ರ ಅಕ್ರಮ ಬಯಲಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಉಮಾರಿಂದ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಅಕ್ಕಿ, ಬೇಳೆ, ಶೇಂಗಾ, ಬೆಲ್ಲ, ಚಿಕ್ಕೆ ಹಾಗೂ ಅಡುಗೆ ಎಣ್ಣೆ ಸೇರಿದಂತೆ ಸರ್ಕಾರದಿಂದ ಬರುವ ಆಹಾರ ಪದಾರ್ಥಗಳನ್ನು ಮೂಟೆಯಲ್ಲಿ ಉಮಾ ಮನೆಗೆ ಕೊಂಡೊಯ್ಯುತ್ತಿದ್ದಾರೆ. ಸ್ಥಳೀಯರ ಮೊಬೈಲ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯ ಕಳ್ಳಾಟ ಬಯಲಾಗಿದೆ.