ಯಾದಗಿರಿ : ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆ ಆರೋಪದ ಹಿನ್ನೆಲೆಯಲ್ಲಿ ಪ್ರೌಢಶಾಲಾ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಜರುಗಿದೆ.
ಯಾದಗಿರಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯೊಂದರ ಶಿಕ್ಷಕ ಹನುಮೇಗೌಡ ಎಂದು ಹೇಳಲಾಗುತ್ತಿದ್ದು, ಶಿಕ್ಷಕ ಹಣಮೇಗೌಡ ವಿರುದ್ಧ ಇದೀಗ ಪೋಕ್ಸೋ ಕಾಯ್ದೆ ಅಡಿ ಕೆಸ್ ದಾಖಲಾಗಿದೆ.ಆರೋಪಿ ಶಿಕ್ಷಕನ ವಿರುದ್ಧ ಇದೀಗ ಕೇಸ್ ದಾಖಲಾಗಿದ್ದು,
ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಶಿಕ್ಷಕ ಹಣಮೆಗೌಡನನ್ನು ನಿನ್ನೆ ಜಿಲ್ಲಾ ಪಂಚಾಯತ್ ಸಿ ಇ ಓ ಅಮಾನತು ಮಾಡಿದ್ದಾರೆ.ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಗರಿಮಾ ಪನ್ವರ್ ಆದೇಶ ಹೊರಡಿಸಿದ್ದಾರೆ.
ಇದೆ ವೇಳೆ ಘಟನೆ ನಡೆದ ತಕ್ಷಣ ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣ ಇಲಾಖೆಯ ನಾಲ್ವರು ಅಧಿಕಾರಿಗಳ ತಂಡವು ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.