ಯಾದಗಿರಿ: ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಮುಖ್ಯ ಶಿಕ್ಷ ನೋರ್ವ ಅನುಚಿತವಾಗಿ ವರ್ತಿಸಿದಂತ ಆರೋಪದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿರುವಂತ ಸರ್ಕಾರಿ ಪ್ರೌಢ ಶಾಲೆಯ ಹೆಡ್ ಮಾಸ್ಟರ್ ಹನುಮೇಗೌಡ ಎಂಬುವರೇ ಅಮಾನತುಗೊಂಡ ಶಿಕ್ಷಕರಾಗಿದ್ದಾರೆ.
ಹೆಡ್ ಮಾಸ್ಟರ್ ಹನುಮೇಗೌಡ ಅವರು ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬುದಾಗಿ ಮಕ್ಕಳ ಪೋಷಕರು ಮೇಲಧಿಕಾರಿಗಳಿಗೆ ದೂರು ನೀಡಿದ್ದರು.
ಪೋಷಕರ ದೂರಿನ ಹಿನ್ನಲೆಯಲ್ಲಿ ತನಿಖೆ ನಡೆಸಿ, ಯಾದಗಿರಿ ಜಿಲ್ಲಾ ಪಂಚಾಯ್ತಿ ಸಿಇಓಗೆ ವರದಿ ನೀಡಲಾಗಿತ್ತು. ವರದಿಯಲ್ಲಿ ಮುಖ್ಯ ಶಿಕ್ಷಕರ ಅನುಚಿತ ವರ್ತನೆಯ ಬಗ್ಗೆ ಮಹತ್ವದ ಮಾಹಿತಿ ನೀಡಲಾಗಿತ್ತು.
ಈ ವರದಿಯನ್ನು ಆಧರಿಸಿ ಯಾದಗಿರಿ ಜಿಲ್ಲಾ ಪಂಚಾಯ್ತಿ ಸಿಇಓ ಅವರು ಅನಪುರ ಸರ್ಕಾರಿ ಪ್ರೌಢ ಶಾಲೆಯ ಹೆಡ್ ಮಾಸ್ತರ್ ಹನುಮೇಗೌಡ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಬೆಳಗಾವಿಯಲ್ಲಿ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಕೋರ್ಟ್ ಗೆ ಹಾಜರು ಪಡಿಸಲು ಕರೆತಂದಿದ್ದ ‘ಆರೋಪಿ ಎಸ್ಕೇಪ್’
ಕರ್ನಾಟಕದ ‘ರಾಮನ ಭಕ್ತ’ರಿಗೆ ಶಾಕ್: ‘ಬೆಂಗಳೂರು-ಅಯೋಧ್ಯೆ’ ವಿಮಾನ ಪ್ರಯಾಣ ದರ ಶೇ.400ರಷ್ಟು ಏರಿಕೆ