ಮೈಸೂರು: ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಬಿಜೆಪಿಯಿಂದ ಅಭ್ಯರ್ಥಿಯಾಗಿರುವ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಯದುವೀರ್ ಕೃಷ್ಣ ರಾಜ ಒಡೆಯರ್ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
ಅವರು ನಾಮಪತ್ರ ಸಲ್ಲಿಸುವೆ ವೇಳೆ ಅವರೊಟ್ಟಿಗೆ ತಾಯಿ ಪ್ರಮೋದದೇವಿ ಒಡೆಯರ್, ಶಾಸಕ ಶ್ರೀವತ್ಸ ಮತ್ತಿನ್ನಿಬ್ಬರು ಹಾಜರಿದ್ದರು. ಅಂದ ಹಾಗೇ ಏ. 3 ರಂದು ನಾಮಪತ್ರ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಈಗ ಇಂದು ಅವರು ನಾಮಪತ್ರ ಸಲ್ಲಿಕೆ ಮಾಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಮುಂಬರುವ ದಿನದಲ್ಲಿ ಮತ್ತೆ ಅವರು ಎರಡನೇ ಬಾರಿ ತಮ್ಮ ಅದ್ದೂರಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.