ಮೈಸೂರು : ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಕ್ಷೇತ್ರಗಳ ಕುರಿತಂತೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು ಇದೀಗ ಮೈಸೂರು ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕು ಎಂಬುದರ ಕುರಿತು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಹೌದು ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಆಗತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ವಿಜಯೇಂದ್ರ ನಾಲ್ಕು ಗೋಡೆ ಮಧ್ಯೆ ಅನೇಕ ವಿಚಾರ ಚರ್ಚೆ ಆಗಿದೆ. ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದಿದ್ದು, ಪರೋಕ್ಷವಾಗಿ ಪ್ರತಾಪ್ ಸಿಂಹ್ ಗೆ ಟಿಕೆಟ್ ಮಿಸ್ ಆಗುವ ಸುಳಿವು ನೀಡಿದರಾ? ಎಂಬ ಅನುಮಾನ ಮೂಡಿದೆ.
ನೀವು ತೆಗೆದುಕೊಳ್ಳುವ ‘ಔಷಧಿ’ ಅಸಲಿಯೇ ಅಥ್ವಾ ನಕಲಿಯೇ.? ಈಗ ಸಾಮಾನ್ಯ ವ್ಯಕ್ತಿಯೂ ಈ ರೀತಿ ‘ಪತ್ತೆ’ ಹಚ್ಬೋದು
ಮೈಸೂರಿಗೆ ಯದುವೀರ್ ಒಡೆಯರ್ ಸ್ಪರ್ಧೆ ವಿಚಾರವಾಗಿ ವಿಜಯೇಂದ್ರ ಹೇಳಿಕೆ ನೀಡಿದ್ದು, ನಾನು ಊಹಾಪೋಹಾಗಳಿಗೆ ಉತ್ತರ ಕೊಡಲ್ಲ . ನಾಲ್ಕು ಗೋಡೆಗಳ ಮಧ್ಯೆ ನಡೆದ ಚರ್ಚೆ ಬಹಿರಂಗಪಡಿಸಲ್ಲ. ಉತ್ತಮ, ಗೆಲ್ಲುವ ಅಭ್ಯರ್ಥಿ ಹಾಕ್ತೇವೆ ಎಂದು ವಿಜಯೇಂದ್ರ ಅವರು ಮೈಸೂರಲ್ಲಿ ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟಿದ್ದಾರೆ.
GOOD NEWS: ಬ್ಯಾಂಕ್ ನೌಕರರಿಗೆ ಶೇ.17ರಷ್ಟು ವಾರ್ಷಿಕ ವೇತನ ಹೆಚ್ಚಳ ಐಬಿಎ, ಒಕ್ಕೂಟಗಳು ಜಂಟಿ ಟಿಪ್ಪಣಿಗೆ ಸಹಿ