ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಶುಕ್ರವಾರ ಏರ್ಪಡಿಸಿದ್ದ ನಾಗರಿಕರ ಅಹವಾಲು ಆಲಿಸುವ ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಉದ್ಘಾಟಿಸಿದರು.
ಶಾಸಕರಾದ ವಿಶ್ವನಾಥ್, ಮುನಿರಾಜು, ಎಂಎಲ್ಸಿ ಎಂ ಆರ್ ಸೀತಾರಾಂ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಪ್ರೊ. ರಾಜೀವ್ ಗೌಡ, ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್, ವಿಶೇಷ ಕಮಿಷನರ್ ಮುನೀಶ್ ಮೌದ್ಗೀಲ್, ಬಿಎಂಆರ್ಡಿಎ ಕಮಿಷನರ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಬಿಡಿಎ ಕಮಿಷನರ್ ಜಯರಾಮ್, ಬೆಂಗಳೂರು ಜಿಲ್ಲಾಧಿಕಾರಿ ದಯಾನಂದ್, ಬಿ ಡಬ್ಲ್ಯೂ ಎಸ್ ಎಸ್ ಬಿ ಎಂಡಿ ರಾಮಪ್ರಶಾತ್ ಮನೋಹರ್ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.