ಬೆಂಗಳೂರು: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಜೊತೆಯಲ್ಲಿಯೇ ಈ ಹಿಂದೆ ಇದ್ದ ‘ಯಶಸ್ವಿನಿ ಯೋಜನೆ’ಯನ್ನು ಅಕ್ಟೋಬರ್ 2ರಿಂದ ರಾಜ್ಯದಲ್ಲಿ ಮರುಜಾರಿಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಮಂಗಳವಾರ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಪ್ರಕಾಶ್ ಕೆ. ರಾಥೋಡ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆಯುಷ್ಮಾನ್ ಭಾರತ್ ಯೋಜನೆ ಇದ್ದರೂ ಕರ್ನಾಟಕದಾದ್ಯಂತ ಯಶಸ್ವಿನಿ ಮರುಜಾರಿಗೆ ಬೇಡಿಕೆ ಇತ್ತು. ಇದಕ್ಕೆ ಆರೋಗ್ಯ, ಹಣಕಾಸು ಇಲಾಖೆಯ ಅನುಮತಿ ಸಿಕ್ಕಿದೆ. ಯಶಸ್ವಿನಿ ಯೋಜನೆಗೆ ಹಳೆ ಟ್ರಸ್ಟ್ ಇತ್ತು ಅದನ್ನು ಹೊಸದಾಗಿ ಮಾಡುತ್ತಿದ್ದೇವೆ ಎಂದಿದ್ದಾರೆ.
ಅಕ್ಟೋಬರ್ 2ರಿಂದ ಈ ಯೋಜನೆ ಜಾರಿ ಮಾಡುವುದಾಗಿ ಈಗಾಗಲೇ ಸಿಎಂ ಬೊಮ್ಮಾಯಿ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಆಯುಷ್ಮಾನ್, ಯಶಸ್ವಿನಿ ಯೋಜನೆ ಎರಡೂ ಇರಲಿವೆ. ಹಿಂದೆ ಇದ್ದ ಎಲ್ಲ ವ್ಯವಸ್ಥೆ ಅಳವಡಿಸಿಕೊಂಡು ಯಶಸ್ವಿನಿ ಯೋಜನೆ ಜಾರಿಯಾಗಲಿದೆ. ಅನುಷ್ಠಾನದ ನಂತರ ಯಾವುದೇ ತೊಂದರೆ ಆಗಬಾರದು ಎಂದು ಎಲ್ಲ ಆಯಾಮದಲ್ಲಿಯೂ ಪರಿಶೀಲಿಸಿ ಸಮಯ ಪಡೆದು ಯೋಜನೆ ಜಾರಿ ಮಾಡುತ್ತಿದ್ದೇವೆ ಎಂದರು.
ಈ ವರ್ಷದ ಬಜೆಟ್ ನಲ್ಲಿ ಯಶಸ್ವಿನಿ ಯೋಜನೆಯನ್ನು ಪುನಾರಂಭಿಸಲು ಮಹತ್ವದ ಘೋಷಣೆ ಮಾಡಿದ್ದು, ಅದಕ್ಕಾಗಿ 300 ಕೋಟಿ ರೂ. ಮೀಸಲಿಡಲಾಗಿದೆ. ಈ ಪೈಕಿ 100 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಯಶಸ್ವಿನಿ ಯೋಜನೆ ರೈತರ ಆರೋಗ್ಯದ ಆಶಾಕಿರಣವಾಗಿದೆ ಎಂದು ಹೇಳಿದ್ದಾರೆ.
ಕರೆ ಮಾಡಿದರೂ ಬಾರದ ಆಂಬ್ಯುಲೆನ್ಸ್… ಗಾಯಾಳುವನ್ನು JCBಯಲ್ಲೇ ಆಸ್ಪತ್ರೆಗೆ ಕರೆದೊಯ್ದ ಸ್ಥಳೀಯರು… ವಿಡಿಯೋ ವೈರಲ್
BIG NEWS: ಅಗತ್ಯ ಔಷಧಗಳ ಪಟ್ಟಿ ಸೇರಿದ ’34 ಹೊಸ ಔಷಧ’ಗಳು: ‘ಕ್ಯಾನ್ಸರ್ ಮೆಡಿಸನ್ಸ್’ ಈಗ ಕೊಂಚ ಅಗ್ಗ