ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ(Yashaswini Health Insurance Scheme) ಅಕ್ಟೋಬರ್ ನಿಂದ ಮರು ಜಾರಿ ಮಾಡಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
BIGG BREAKING NEWS : ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : ಬೆಂಗಳೂರಿನ ಮೂವರು ಪೊಲೀಸ್ ಸಿಬ್ಬಂದಿ ಸಾವು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಶಸ್ವಿನಿ ಯೋಜನೆ ಜಾರಿಗೆ ರೈತರು ಮತ್ತು ಸಹಕಾರಿಗಳ ಬೇಡಿಕೆ ಇತ್ತು. ಹಾಗಾಗಿ ಅಕ್ಟೋಬರ್ ನಿಂದ ರಾಜ್ಯಾದ್ಯಂತ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ ಸದಸ್ಯರು ಮತ್ತು ಅವರ ಕುಟುಂಬವನ್ನು ಒಳಗೊಂಡ ರಾಜ್ಯದ 1.5 ಕೋಟಿ ಜನರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.
ಯಶಸ್ವಿನಿ ಯೋಜನೆ ಮೂಲಕ ವೈದ್ಯಕೀ ಕ್ಷೇತ್ರದ 14 ವಿಭಾಗಗಳಲ್ಲಿ ಗುರುತಿಸಿದ 295 ಕಾಯಿಲೆಗಳ823 ಶಸ್ತ್ರಚಿಕಿತ್ಸೆಗೆ ನಗದು ರಹಿತ ಸೌಲಭ್ಯ ಪಡೆಯಬಹುದು. ಈ ಮೊದಲಿದ್ದ905 ಯಶಸ್ವಿನಿ ವರ್ಕ್ ಆಸ್ಪತ್ರೆಗಳನ್ನು 1800 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು,ಗ್ರಾಮೀಣ ಯಶಸ್ವಿನಿ ಯೋಜನೆಯಡಿಯಲ್ಲಿ 1 ಬಾರಿ ಚಿಕಿತ್ಸೆಗೆ ಒಳಗಾದರೆ 1.25 ಲಕ್ಷ ರೂ. ಮಿತಿ ಹಾಗೂ ಒಂದಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆಗೆ ಒಳಗಾದರೆ 2 ಲಕ್ಷ ರೂ.ವರೆಗೆ ನಗದು ರಹಿತ ಶಸ್ತ್ರ ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎನ್ನಲಾಗಿದೆ.