ಬೆಂಗಳೂರು : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ಕೇಸ್ ದಾಖಲಿಸಿತ್ತು. ಈ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಂಡ ಹೈಕೋರ್ಟ್, ಯತ್ನಾಳ್ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿತ್ತು.ಇದೀಗ ಹೈ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ.
ಹೌದು ಬಸನಗೌಡ ಪಾಟೀಲ್ ಯತ್ನಾಳ್ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ನಿಂದ ಅವಕಾಶ ನೀಡಿರುವ ವಿಚಾರವಾಗಿ ಹೈಕೋರ್ಟ್ ಆದೇಶದ ವಿರುದ್ಧ ಇದೀಗ ಪಿಸಿಬಿ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಸಲ್ಲಿಸಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಾರ್ಖಾನೆ ತೆರೆಯಲು ಅನುಮತಿ ನೀಡದಂತೆ ಕೋರಿ ಇದೀಗ ಪಿಸಿಬಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಕಾರ್ಖಾನೆ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಪಿಸಿಬಿ ಆರೋಪಿಸಿದೆ.
ಏನಿದು ಪ್ರಕರಣ?
ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದ ಶ್ರೀ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅದರಂತೆ 2024 ಜನವರಿ 29 ರಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶಕ್ಕೆ ತಡೆ ನೀಡಿತ್ತು. ಆದರೆ ಇತ್ತೀಚಿಗೆ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ನ್ನು ರದ್ದುಗೊಳಿಸಿತ್ತು. ಇದೀಗ ಪಿಸಿಬಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ.