ಬೆಂಗಳೂರು : ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಸಮಾವೇಶ ಮಾಡುತ್ತೇವೆ. ವೀರಶೈವ ಲಿಂಗಾಯತ ಸಮುದಾಯ ಯಾರ ಸ್ವತ್ತು ಅಲ್ಲ ಹಾಗಾಗಿ ಈ ಒಂದು ವೀರಶೈವ ಲಿಂಗಾಯತ ಸಮಾವೇಶಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬರಬಹುದು ಎಂದು ಬಿಜೆಪಿಯ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿಕೆ ನೀಡಿದರು.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮುದಾಯ ಒಗ್ಗೂಡಿಸಲು ಸಮಾವೇಶ ಆಯೋಜನೆ ಮಾಡಲಾಗಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಡೆಯುವ ಕೆಲಸ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಸಮಾವೇಶ ನಡೆಸಲು ನಿರ್ಧಾರ ಮಾಡಲಾಗಿದೆ. ವೀರಶೈವ ಲಿಂಗಾಯತ ಸಮಾವೇಶಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬರಬಹುದು ಎಂದರು.
ವೀರಶೈವ ಲಿಂಗಾಯತ ಸಮುದಾಯ ಯಾರ ಸ್ವತ್ತು ಅಲ್ಲ. ಈ ಒಂದು ಸಮಾವೇಶದಿಂದ ಪಕ್ಷಕ್ಕೆ ಹಿನ್ನಡೆ ಆಗುವುದಿಲ್ಲ. ನಾನು ಈ ಹಿಂದೆ ಬೇರೆಯವರ ಮಾತು ಕೇಳಿ ಹಿನ್ನಡೆ ಅನುಭವಿಸಿದ್ದೇನೆ. ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿ ಮಾಡೋಕೆ ಹೋಗಬಾರದು. ವೀರಶೈವ ಲಿಂಗಾಯತ ಸಮಾವೇಶಕ್ಕೆ ಶಾಸಕ ಯತ್ನಾಳ್ ಬರಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದರು.