ವಿಜಯಪುರ : ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ಬಹುಮಾನ ನೀಡಲಾಗುತ್ತೆ ಎಂದು ಹಿಂದೂ ಯುವಕರಿಗೆ ವಿಜಯಪುರ ಶಾಸಕ ಯತ್ನಲ್ ಕರೆ ನೀಡಿದ ವಿಚಾರವಾಗಿ, ಇದೀಗ ವಿಜಯಪುರದಲ್ಲಿ ಮುಸ್ಲಿಂ ಮುಖಂಡ ಮತ್ತು ವಕೀಲ ಎಸ್ ಎಸ್ ಖಾದ್ರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ತನ್ನ ಪತ್ನಿಯನ್ನು ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆ ಮಾಡಿಸಲಿ ಕಾನೂನು ಬದ್ಧವಾಗಿ ತನ್ನ ಪತ್ನಿಯನ್ನು ವಿವಾಹ ಮಾಡಿಸಿದರೆ ಯಾವುದೇ ಚುನಾವಣೆಯಲ್ಲಿ ಯತ್ನಾಳ ವಿರುದ್ಧ ಮುಸ್ಲಿಮರು ಸ್ಪರ್ಧಿಸಲ್ಲ ಎಂದು ವಿಜಯಪುರದಲ್ಲಿ ಮುಸ್ಲಿಂ ಮುಖಂಡ ಎಸ್ ಎಸ್ ಖಾದ್ರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶಾಸಕ ಯತ್ನಾಳ್ ಹೇಳಿದ್ದೇನು?
ಇತ್ತೀಚಿಗೆ ಕೊಪ್ಪಳದಲ್ಲಿ ಹತ್ಯೆಯಾದ ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಜೊತೆ ಭೇಟಿ ನೀಡಿ ಯತ್ನಾಳ್ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದೆ. ಸಿದ್ದರಾಮಯ್ಯ ಸರ್ಕಾರ ಅಹಿಂದ ಸರ್ಕಾರ ಎಂದೆನ್ನುತ್ತಿದೆ. ಆದರೆ ರಾಜ್ಯದಲ್ಲಿ ಅಹಿಂದ ಅಲ್ಲ, ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತಿದೆ ಎಂದು ಕಿಡಿಕಾರಿದರು.
ಹಿಂದೂ ಯುವಕ ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಸಿಎಂ ಸಿದ್ದರಾಮಯ್ಯ ಸರಕಾರವನ್ನ ಅಧಿವೇಶನದಲ್ಲಿ ನಾವು ತರಾಟೆ ತೆಗೆದುಕೊಳ್ಳಲಿದ್ದೇವೆ. ಯಾರೂ ಮುಸ್ಲಿಂ ಯುವತಿಯರನ್ನು ಪ್ರೀತಿ ಮಾಡಬಾರದಾ ? ಅವರನ್ನು ಮದುವೆ ಆಗಬಾರದೆಂದು ಏಲ್ಲಿದೆ ? ಇನ್ಮುಂದೆ ನಾವು ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವೆವು ಎನ್ನುವ ಅಭಿಯಾನ ಆರಂಭಿಸಲಿದ್ದೇವೆ ಎಂದು ಹೇಳೀಕೆ ನೀಡಿದ್ದರು.