ಕೊಪ್ಪಳ : ರಾಜ್ಯದಲ್ಲಿ ಅತ್ಯಂತ ತಳಮಟ್ಟದಿಂದಲೂ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಮಾಜಿ ಸಿಎಂ ಯಡಿಯೂರಪ್ಪ ಪಿತಾಮಹ ಇದ್ದಂತೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ.
ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟನೆ ಹಾಗೂ ಮೂರು ಜಿಲ್ಲಾ ಕಾರ್ಯಾಲಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಮಾತನಾಡಿದರು.
ಕರ್ನಾಟಕದಲ್ಲಿ ಎಲ್ಲರಿಗಿಂತ ಹಿರಿಯ ನಾಯಕ ಹಾಗೂ ನಮ್ಮ ಪಿತಾಮಹ ಯಡಿಯೂರಪ್ಪ ಅವರೇ ಎಂದು ಹೇಳಿದರು. ಬಿಜೆಪಿ ಆಡಳಿತದಲ್ಲಿ ಎಲ್ಲರಿಗೂ ನ್ಯಾಯ ಸಿಗುತ್ತದೆ, ಒಂದೇ ದೇಶ, ಒಬ್ಬರೇ ಪ್ರತಿನಿಧಿ ಎಂಬ ಭಾವನೆಯಲ್ಲಿ ನಡೆಯುತ್ತೇವೆ ಎಂದರು. ಅಧಿಕಾರದ ವೇಳೆ ಉತ್ತಮ ಕೆಲಸ ಮಾಡಿ ಅದರ ರಿಪೋರ್ಟ್ ಕಾರ್ಡ್ ಹಿಡಿದು ಹೋಗುವ ತಾಕತ್ತು ಬಿಎಸ್ವೈ, ಬೊಮ್ಮಾಯಿಗಿದೆ ಎಂದು ಹೇಳಿದರು.
ಸಮರ್ಥ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವ, ಯಡಿಯೂರಪ್ಪ, ಬೊಮ್ಮಾಯಿ ಅವರ ನೇತೃತ್ವದಲ್ಲಿ ದೇಶ- ರಾಜ್ಯದಲ್ಲಿ ಮಹಿಳಾ ಸಶಕ್ತೀಕರಣ ಕಾರ್ಯ ನಡೆಯಿತು. 12 ಕೋಟಿಗೂ ಹೆಚ್ಚು ಶೌಚಾಲಯ ನಿರ್ಮಾಣ ನಡೆಯಿತು ಎಂದು ವಿವರಿಸಿದರು.ಆಯುಷ್ಮಾನ್ ಭಾರತ್ ಮೂಲಕ 5 ಲಕ್ಷ ರೂಪಾಯಿಯ ಸ್ವಾಸ್ಥ್ಯ ರಕ್ಷಣೆ ಲಭಿಸಿದೆ. ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ್ (ನಳ್ಳಿ ನೀರು) ಲಭಿಸುತ್ತಿದೆ. ಉಜ್ವಲ ಯೋಜನೆಯಡಿ 9 ಕೋಟಿ ಸಿಲಿಂಡರ್ ಸಂಪರ್ಕ ಕೊಡಲಾಗಿದೆ ಎಂದು ತಿಳಿಸಿದರು.
BIGG NEWS : ‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಹೇಳಿಕೆಗೆ ಡಿಕೆಶಿ ಸಮರ್ಥನೆ