ಬೆಂಗಳೂರು: ರಾಹುಲ್ ಗಾಂಧಿಯವರನ್ನು ( Rahul Gandhi ) ಬಚ್ಚಾ ಎಂದು ಹೇಳುವ ಬಿಎಸ್ ಯಡಿಯೂರಪ್ಪ ( BS Yediyurappa ) ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಕಿಡಿಕಾರಿದ್ದಾರೆ.
ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ @BSYBJP ಅವರೇ, ನಿಮ್ಮ @narendramodi ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ. 5/7#ಬಡಾಯಿಬೊಮ್ಮಾಯಿ
— Siddaramaiah (@siddaramaiah) October 12, 2022
ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನನ್ನ ಎರಡೇ ಎರಡು ಸವಾಲು.. 1. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ. 2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ಸವಾಲ್ ಎಸೆದಿದ್ದಾರೆ.
ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ @BSYBJP ಮತ್ತು ಹಾಲಿ ಮುಖ್ಯಮಂತ್ರಿ @BSBommai ಅವರಿಗೆ ನನ್ನ ಎರಡೇ ಎರಡು ಸವಾಲು..
1. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ.
2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ. 1/7#ಬಡಾಯಿಬೊಮ್ಮಾಯಿ— Siddaramaiah (@siddaramaiah) October 12, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಬಿಎಸ್ ಯಡಿಯೂರಪ್ಪ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ @BSBommai ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ @BSYBJP ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ. 2/7#ಬಡಾಯಿಬೊಮ್ಮಾಯಿ
— Siddaramaiah (@siddaramaiah) October 12, 2022
ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಬಿಎಸ್ ಯಡಿಯೂರಪ್ಪ ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ @BSYBJP ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು. 3/7#ಬಡಾಯಿಬೊಮ್ಮಾಯಿ
— Siddaramaiah (@siddaramaiah) October 12, 2022
ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಬಸವರಾಜ ಬೊಮ್ಮಾಯಿ ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM’’ ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ಎಂದು ಹೇಳಿದ್ದಾರೆ.
ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ @BSBommai ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM’’ ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ. 4/7#ಬಡಾಯಿಬೊಮ್ಮಾಯಿ
— Siddaramaiah (@siddaramaiah) October 12, 2022
ಪಾಪ, ಬಿಎಸ್ ಯಡಿಯೂರಪ್ಪ ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು ಎಂದಿದ್ದಾರೆ.
ಪಾಪ, @BSYBJP ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು. 6/7#ಬಡಾಯಿಬೊಮ್ಮಾಯಿ
— Siddaramaiah (@siddaramaiah) October 12, 2022
ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಬಿಜೆಪಿಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ತಿಳಿಸಿದ್ದಾರೆ.
ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ @BJP4India ಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ. 7/7#ಬಡಾಯಿಬೊಮ್ಮಾಯಿ
— Siddaramaiah (@siddaramaiah) October 12, 2022