ಕಲಬುರಗಿ : ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ 2022 ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಬಿಡಿಎ ವಸತಿ ಯೋಜನೆ ಅವ್ಯವಹಾರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆರೋಪ , ದಸರಾ ಸಂಭ್ರಮಕ್ಕೆ ಪ್ರಧಾನಿ ಮೋದಿ ಆಗಮನದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣ – ಸಿಎಂ ಬೊಮ್ಮಾಯಿ ಘೋಷಣೆ
ಬಿಡಿಎ ವಸತಿ ಯೋಜನೆ ಅವ್ಯವಹಾರ ವಿಷಯವಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ವಿರುದ್ಧ ಮತ್ತೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧ ಈ ಹಿಂದೆ ಇಂತಹ ಹಲವು ಕೇಸ್ಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಈ ಕೇಸ್ ಕೂಡಾ ವಿಫಲವಾಗಲಿದೆ ಎಂದು ಹೇಳಿದರು.
ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣ – ಸಿಎಂ ಬೊಮ್ಮಾಯಿ ಘೋಷಣೆ
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ 2022 ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಸ್ವೈ ತಮ್ಮ ಅಧಿಕಾರ ಅವಧಿಯಲ್ಲಿ ಬಿಡಿಎ ವಸತಿ ಯೋಜನೆ ಗುತ್ತಿಗೆ ನೀಡುವಾಗ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆಂಬ ಆರೋಪ ಇದೆ.
ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣ – ಸಿಎಂ ಬೊಮ್ಮಾಯಿ ಘೋಷಣೆ
ಇದಕ್ಕೆ ಸಂಬಂಧಿಸಿದಂತೆ ಸದ್ಯ ಲೋಕಾಯುಕ್ತದಲ್ಲಿ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಇಂತಹ ಹಲವು ಪ್ರಕರಣಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಇದು ಕೂಡಾ ಒಂದು. ಯಡಿಯೂರಪ್ಪ ಇದರಲ್ಲಿಯೂ ಆರೋಪ ಮುಕ್ತರಾಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣ – ಸಿಎಂ ಬೊಮ್ಮಾಯಿ ಘೋಷಣೆ
ಸಂಪುಟ ವಿಸ್ತರಣೆ ವಿಷಯವಾಗಿ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ದಸರಾ ಸಂಭ್ರಮಕ್ಕೆ ಪ್ರಧಾನಿ ಮೋದಿ ಅವರು ಬರುವ ವಿಷಯ ಚರ್ಚೆಯಲ್ಲಿತ್ತು. ಸದ್ಯ ಅವರು ಬರೋಕ್ಕಾಗಲ್ಲ ಅಂತ ಸಂದೇಶ ನೀಡಿದ್ದಾರೆ ಎಂದರು.