ತುಮಕೂರು: ಕರ್ನಾಟಕದಲ್ಲಿ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಗಳ ಮಧ್ಯೆ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಕೂಗು ಮತ್ತೆ ಕೇಳಿಬಂದಿದೆ. ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್ ಅವರು ವೀರಶೈವ ಲಿಂಗಾಯತ ಮಹಾಸಭಾ ಸಮಾವೇಶದ ಪೂರ್ವ ಸಭೆಯ ಬಗ್ಗೆ ಸುದ್ದಿಗೋಷ್ಠಿ ನಡೆಸಿದ್ದಾರೆ.
ಯಡಿಯೂರಪ್ಪ ಹಿಂದೂ ಅಲ್ಲ. ವೀರಶೈವ ಲಿಂಗಾಯತ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಸಾಗರಹಳ್ಳಿ ನಟರಾಜ್, ಯಡಿಯೂರಪ್ಪ ಹಿಂದೂ ಅಲ್ಲ. ವೀರಶೈವ ಲಿಂಗಾಯತ. ಯಡಿಯೂರಪ್ಪ ವೀರಶೈವ ಲಿಂಗಾಯತ ಅಂದ್ರೆ ಅವರು ಹಿಂದೂ ಅಲ್ಲ. ಯಡಿಯೂರಪ್ಪ ನಾನು ಹಿಂದೂ ಅಲ್ಲ ಅಂತ ಹೇಳೋದು ಬಿಡೋದು ಅವರ ವೈಯಕ್ತಿಕ ವಿಚಾರ. ಅವರು ಏನ್ ಬೇಕಾದ್ರು ಹೇಳಿಕೊಳ್ಳಲಿ ಎಂದು ಹೇಳಿದರು.
ನಮ್ಮಲ್ಲಿ 106 ಉಪ ಪಂಗಡಗಳಿವೆ. ಅವರೆಲ್ಲರೂ ವೀರಶೈವ ಲಿಂಗಾಯತರು. ಇವತ್ತಿನಿಂದ ಯಾರು ಲಿಂಗಾಧಾರಣೆ ಮಾಡ್ತಾರೋ, ಅವರೆಲ್ಲರೂ ವೀರಶೈವ ಲಿಂಗಾಯತರು. ನಮ್ಮ ಬೈಲವನ್ನೆಲ್ಲಾ ಒಪ್ಪಿಕೊಂಡು ಬರುವವರಿಗೆ ಸ್ವಾಗತ ಎಂದರು.