ಹುಬ್ಬಳ್ಳಿ: ಲೋಕಸಭೆ ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ಎಲ್ಲ ಕಡೆ ಬರುತ್ತಾರೆ. ರಾಷ್ಟ್ರೀಯ ನಾಯಕರ ಜೊತೆ ಸೆಲೆಬ್ರೆಟಿಗಳು ಕೂಡಾ ಪ್ರಚಾರಕ್ಕೆ ಬರುತ್ತಾರೆ. ಎರಡು ಮೂರು ದಿನಗಳಲ್ಲಿ ರಾಷ್ಟ್ರೀಯ ನಾಯಕರ ಪ್ರಚಾರ ಪ್ರವಾಸದ ನಿರ್ಧಾರ ಆಗುತ್ತದೆ. ಧಾರವಾಡ ಹಾಗೂ ನಮ್ಮ ಕ್ಷೇತ್ರಕ್ಕೂ ಪ್ರಚಾರಕ್ಕೆ ಬರುತ್ತಾರೆ. ನಮ್ಮ ಕ್ಷೇತ್ರಕ್ಕೆ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್ ಡಿಎ ಅವಧಿಯಲ್ಲಿ ಎನ್ ಡಿ ಆರ್ ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎಂದು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.
ಇದೇ ವೇಳೆ ಮೋದಿ ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇನ್ನು ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಪರೋಕ್ಷವಾಗಿ ಕಾಂಗ್ರೆಸ್ ಗೆ ಕಪಾಳಕ್ಕೆ ಹೊಡೆಯುತ್ತಾರೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ವಾತಾವರಣ ಉತ್ತಮವಾಗಿದೆ. ಎಲ್ಲ ಕಡೆ ಮೋದಿ ಪರ ಅಲೆ ಇದೆ. ರಾಜ್ಯದಲ್ಲಿ ಭಿನ್ನಮತ ಶಮನ ಆಗುತ್ತಿದೆ. ಸಂಗಣ್ಣ ಕರಡಿ ಅವರು ಸಮಾಧಾನ ಆಗಿದ್ದಾರೆ.
‘ಮತದಾನ’ದ ಮೂಲಕ ಜನರೇ ‘ಕಾಂಗ್ರೆಸ್’ನವರ ಕಪಾಳಕ್ಕೆ ಹೊಡೆಯುತ್ತಾರೆ- ಬೊಮ್ಮಾಯಿ
ಸಾರ್ವಜನಿಕರೇ ಗಮನಿಸಿ : ‘ವೋಟರ್ ಐಡಿ’ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾರ್ಗದರ್ಶಿ